ರಾಮನಗರ, ಜೂ.18,2019(www.justkannada.in): ಪ್ರವಾಸೋದ್ಯಮ ಇಲಾಖೆಯಿಂದ ಕಣ್ವ ಜಲಾಶಯ ಬಳಿ 10 ಕೋಟಿ ರೂ. ವೆಚ್ಚದಲ್ಲಿ ವಿಶ್ವ ದರ್ಜೆಯ ಮಕ್ಕಳ ಉದ್ಯಾನವನ ನಿರ್ಮಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವಾದ ಸಾ.ರಾ. ಮಹೇಶ್ ಇಂದು ತಿಳಿಸಿದರು.
ಈ ಬಗ್ಗೆ ಮಾತನಾಡಿದ ಸಚಿವ .ಸಾ.ರಾ ಮಹೇಶ್, ಜಲಾಶಯ ಬಳಿ 5ಎಕರೆ ಪ್ರದೇಶವನ್ನು ಪ್ತವಾಸೋದ್ಯಮಕ್ಕೆ ಮೀಸಲಿಡಲಾಗಿದೆ. ಈಗಾಗಲೆ 2 ಕೋಟಿ ರೂ.ಗಳನ್ನು ಚಿಲ್ಡರ್ನ್ ವರ್ಲ್ಡ್ ನಿರ್ಮಾಣಕ್ಕೆ ಬಿಡುಗಡೆ ಮಾಡಲಾಗಿದೆ. 10 ಕೋಟಿ ಪ್ರಸ್ತಾವನೆಯಲ್ಲಿ ಉಳಿದ 8 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಈ ಕೂಡಲೆ ಈ ಕಾಮಗಾರಿಗೆ ಟೆಂಡರ್ ಕರೆಯಲು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಲಾಗಿದೆ. ಇನ್ನು ರೇಷ್ಮೆ ಬೆಲೆ ಹೆಚ್ಚಿಸಲು ರೇಷ್ಮೆಯ ಹದಿನೈದು ಉಪ ಉತ್ಪನ್ನಗಳ ತಯಾರಿಗೆ ಸಿದ್ದಂತೆ ನಡೆಸಲಾಗುತ್ತಿದೆ. ಮುಂದಿನ ವಾರದಲ್ಲಿ ಈ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ ಎಂದರು.
ರೇಷ್ಮೆ ಸೀರೆ ಸಂಬಂಧ ಚನ್ನಪಟ್ಟಣದಲ್ಲಿನ ಹಳೆ ಕಟ್ಟಡಗಳ ನವೀಕರಣ ಜತೆಗೆ ಒಂದು ಲಕ್ಷ ಸೀರೆ ತಯಾರಿಕೆಗೆ ಆದ್ಯತೆ ನೀಡಲಾಗುವುದು. ಮೈಸೂರಿನಲ್ಲಿಯು ಹೊಸ ಕಟ್ಟಡಗಳನ್ನು ಸಿದ್ದ ಪಡಿಸಲಾಗುವುದು. ಇದಕ್ಕೆ 100 ಕೋಟಿ ಮೀಸಲಿಡಲಾಗುವುದು ಎಂದು ಸಚಿವ ಸಾ.ರಾ ಮಹೇಶ್ ತಿಳಿಸಿದರು.
ರೇಷ್ಮೆ ಆಯೋಗದ ಕಾರ್ಯದರ್ಶಿಯೊಂದಿಗೆ ಸಂಜೆ ಸಭೆ ನಡೆಸಲಾಗುತ್ತಿದ್ದು, ರೇಷ್ಮೆ ದರ ಸಂಬಂಧ ಚರ್ಚೆ ಮಾಡಲಾಗುವುದು. ಅನ್ ಲೈನ್ ಮೂಲಕ ರೈತರಿಗೆ ಪೇಮೆಂಟ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಸಂಜೆಯೊಳಗೆ ಪೆಮೇಂಟ್ ಗೆ ತೊಡಕಾಗಿದೆ. ರೇಷ್ಮೆ ಹರಾಜು ಮುನ್ನವೇ ಅಕೌಂಟ್ ಗಳಲ್ಲಿಹಣ ಇಡುವ ವ್ಯವಸ್ಥೆ ಮಾಡಲಾಗುವುದು. ರೇಷ್ಮೆ ಮಾರುಕಟ್ಟೆಯನ್ನು ಅಧುನೀಕರಣ ಮಾಡಲಾಗುವುದು ಎಂದು ಸಾ.ರಾ ಮಹೇಶ್ ಹೇಳಿದರು.
Key words: World class -children’s park -near – Kanva dam-Minister – sara mahesh