ಮೈಸೂರು,ಜೂ,21,2019(www.justkannada.in): ಇಂದು 5ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಬರೋಬ್ಬರಿ 70 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗುವ ಮೂಲಕ ಮತ್ತೊಂದು ದಾಖಲೆ ನಿರ್ಮಾಣವಾಯಿತು.
ಇಂದು ಅಂತರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ನಗರದ ರೇಸ್ ಕೋರ್ಸ್ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಸಾಮೂಹಿಕ ಯೋಗ ಪ್ರದರ್ಶನ ಆಯೋಜಿಸಲಾಗಿತ್ತು. ಸಾಮೂಹಿಕ ಯೋಗ ಪ್ರದರ್ಶನಕ್ಕೆ ಡೊಳ್ಳು ಬಾರಿಸುವ ಮೂಲಕ ಸಚಿವರಾದ ಜಿ.ಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ಹಾಗೂ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳು ಚಾಲನೆ ನೀಡಿದರು.
ಬೃಹತ್ ವೇದಿಕೆಯಲ್ಲಿ ಸುತ್ತೂರು ಮಠದ ಶ್ರೀ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಸ್ವಾಮೀಜಿ , ಮೇಯರ್ ಪುಷ್ಪಲತಾ ಜಗನ್ನಾಥ್ , ಉಪ ಮೇಯರ್ ಶಫಿ ಅಹಮದ್, ಶಾಸಕ ರಾಮದಾಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ , ಪೊಲೀಸ್ ಆಯುಕ್ತ ಬಾಲಕೃಷ್ಣ ಮತ್ತಿತರರು ಭಾಗಿಯಾಗಿದ್ದರು.
ಇನ್ನು ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಯೋಗಪಟುಗಳ ಹಿಂಡು ಹರಿದುಬಂದಿತ್ತು. ಸುಮಾರು 70 ಸಾವಿರಕ್ಕೂ ಹೆಚ್ಚು ಯೋಗಾಪಟುಗಳು ಸಾಮೂಹಿಕ ಯೋಗಪ್ರದರ್ಶನ ಮಾಡುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದರು. ಕಳೆದ ವರ್ಷ 60 ಸಾವಿರ ಮಂದಿ ಸೇರಿದ್ದರು. ಹೀಗಾಗಿ ಮೈಸೂರು ಕಳೆದ ವರ್ಷದ ದಾಖಲೆ ಮುರಿದು ಮತ್ತೊಂದು ದಾಖಲೆ ಮಾಡಿದೆ.
ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರ ಗುರುತಿಸಿರುವ ಪ್ರಮುಖ 5ಸ್ಥಳಗಳಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಒಂದಾಗಿದ್ದು, ಬೃಹತ್ ಯೋಗಪ್ರದರ್ಶನದ ಕಾರ್ಯಕ್ರಮಕ್ಕೆ ಸಾವಿರಾರು ಯೋಗ ಪಟುಗಳು ಸಾಕ್ಷಿಯಾಗಿದ್ದರು. ಈ ಮೂಲಕ ಯಾವುದೇ ಅಡೆತಡೆ ಗಳಿಲ್ಲದೆ 5ನೇ ವರ್ಷದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸುಗಮವಾಗಿ ನಡೆಯಿತು.
Key words: Mysore -another -record -World Yoga Day.