ಬೆಂಗಳೂರು,ಡಿಸೆಂಬರ್,07,2020(www.justkannada.in) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 6 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2-3 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12ರವರೆಗೂ ಮಳೆ ಸುರಿಯಲಿದೆ ಎಂದು ತಿಳಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಅಂದರೆ ಡಿ.12ರವರೆಗೂ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇನ್ನು ಮೂರು ದಿನ ಬೆಂಗಳೂರಿನಲ್ಲಿ ಗರಿಷ್ಠ 24 ಹಾಗೂ ಕನಿಷ್ಟ 19 ಡಿಗ್ರಿ ಸೆಲ್ಷಿಯಸ್ ತಾಪಮಾನ ಇರಲಿದ್ದು, ಚಳಿ ಹೆಚ್ಚಾಗಲಿದೆ. ತುಂತುರು ಮಳೆಯೂ ಸುರಿಯುವ ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ.
key words : 6 days-Rainfall-likely-across-state-Meteorological- department-forecast