ಬೆಂಗಳೂರು,ಡಿಸೆಂಬರ್,08,2020(www.justkannada.in) : ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದೆ. ಪ್ರತಿಪಕ್ಷಗಳು ಈ ಹಿಂದೆ ತಾವೇ ಕೃಷಿ ಸುಧಾರಣೆಗಳನ್ನು ಬೆಂಬಲಿಸಿದ್ದವು. ಪ್ರತಿಪಕ್ಷಗಳ ಈಗಿನ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಸಚಿವರು ಹೇಳಿದ್ದಾರೆ.
ಜನರ ವಿಶ್ವಾಸ ಕಳೆದುಕೊಂಡು ಚುನಾವಣೆಗಳಲ್ಲಿ ಸತತ ಸೋಲುಗಳಿಂದ ಹತಾಶಗೊಂಡಿರುವ ವಿಪಕ್ಷಗಳು ರೈತರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿವೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ವಿಸ್ತಾರ ಮಾರುಕಟ್ಟೆ ಕಲ್ಪಿಸಿ, ಅನ್ನದಾತರ ಆದಾಯ ಹೆಚ್ಚಿಸುವ ಸದುದ್ದೇಶ ಹೊಂದಿದ್ದು, ಈಗಿರುವ ಎಪಿಎಂಸಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಸಹ ಮುಂದುವರಿಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಯುಪಿಎ ಅಧಿಕಾರದಲ್ಲಿದ್ದಾಗ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು
ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಈ ಸುಧಾರಣೆಗಳನ್ನು ತರಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.
ಡಿಎಂಕೆ ಪ್ರಣಾಳಿಕೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮ್ರಿಂದರ್ ಸಿಂಗ್ ಅವರ ಹೇಳಿಕೆಗಳೂ ಈ ಹಿಂದೆ ಈ ಸುಧಾರಣೆಗಳನ್ನು ಬೆಂಬಲಿಸಿದ್ದವು. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಈಗಾಗಲೇ ಕೇಂದ್ರದ ಮಸೂದೆಗಳು ಜಾರಿ ಬರುವಂತೆ ಅಧಿಸೂಚನೆ ಹೊರಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
english summary….
The opposition is now protesting against the agriculture bill once they had supported- Minister Dr. K. Sudhakar
Bengaluru, Dec. 8, 2020 (www.justkannada.in): “Opposition parties are today protesting against the agricultural bill that once they had supported. BJP will also fight against the anti-propaganda made by vested interests,” said Health and Medical Education Minister Dr. K. Sudhakar.
“The earlier UP government had also planned to bring the same changes and improvements. It was mentioned, even in the Congress manifesto. Then Agriculture Minister in the center Sharad Pawar had also written regarding this to all the Chief Ministers. Even the DMK manifesto and Punjab Chief Minister Capt. Amarinder Singh’s statements also had supported it. Delhi Chief Minister Arvind Kejriwal has already issued a notification on implementing these bills,” he explained.
Keywords: Minister K. Sudhakar/ protests/ agriculture bill
key words : agricultural-reforms-had-previously-supported- them-Opposition-now-Opposition-Minister-Dr.K.Sudhakar