ಬೆಂಗಳೂರು,ಡಿಸೆಂಬರ್,8,2020(www.justkannada.in): ಹೊಸ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಮಧ್ಯೆ ರೈತರಪರ ಸಂಘಟನೆಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದವು.
ಭಾರತ್ ಬಂದ್ ಬೆಂಬಲಿಸಿ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಿ ರೈತರ ಹೋರಾಟಕ್ಕೆ ಸಾಥ್ ನೀಡಿದರು. ಈ ಮಧ್ಯೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲು ಮುಂದಾದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ವಶಕ್ಕೆ ಪಡೆದರು.
ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ವಾಟಾಳ್ ನಾಗರಾಜ್, ಸಾರಾ ಗೋವಿಂದು ಹಾಗೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ತಡೆ ನಡೆಸಿ, ರಸ್ತೆ ಮಧ್ಯೆ ಪ್ರತಿಭಟನೆಗೆ ಕುಳಿತ ಕಾರಣ ವಾಟಾಳ್ ನಾಗರಾಜ್ ಹಾಗೂ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದೊಯ್ದರು. ಭಾರತ್ ಬಂದ್ ಬೆಂಬಲಿಸಿ ರೈತ ಸಂಘಟನೆಗಳ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸದ್ಯ ಮುಕ್ತಾಯವಾಗಿದೆ.
Key words: barath bandh-Protest- road bandh-kannada fighter-vatal Nagaraj – arrested