ಬೆಂಗಳೂರು,ಡಿಸೆಂಬರ್,12,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಸಹ ಮುಷ್ಕರ ಮುಂದುವರೆಸಿದ್ದು, ಈ ನಡುವೆ ಬಸ್ ಸಂಚಾರ ತಡೆಯಲು ಮುಂದಾದ ನಾಲ್ವರು ಸಾರಿಗೆ ಸಿಬ್ಬಂದಿಯನ್ನ ಉಪ್ಪಾರಪೇಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಪೊಲೀಸ್ ಭದ್ರತೆಯಲ್ಲಿ ಸಾರಿಗೆ ಸಂಚಾರಕ್ಕೆ ಬಿಎಂಟಿಸಿಯಿಂದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗಳು ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಇನ್ನು ಬಸ್ ಸಂಚಾರ ತಡೆಯಲು ಯತ್ನಿಸುವವರ ವಿರುದ್ಧ ಕೇಸ್ ಹಾಕಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆ ಮೆಜೆಸ್ಟಿಕ್ ನಲ್ಲಿ ಬಸ್ ಸಂಚಾರ ತಡೆಯಲು ಮುಂದಾದ ನಾಲ್ವರು ಸಾರಿಗೆ ಸಿಬ್ಬಂದಿಗಳನ್ನ ಉಪ್ಪಾರಪೇಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: transport staff- strike –Bangalore-bus -detained –police -four