ಮೈಸೂರು,ಡಿಸೆಂಬರ್,14,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು ಈ ಹಿನ್ನೆಲೆ ರಾಜ್ಯಾದ್ಯಂತ ಬಸ್ ಸಂಚಾರ ಬಂದ್ ಆಗಿದ್ದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಇದೇ ಪರಿಸ್ಥಿತಿ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರೀಯ ಬಸ್ ನಿಲ್ದಾಣಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಭೇಟಿ ನೀಡಿ ಕೇಂದ್ರೀಯ ಬಸ್ ನಿಲ್ದಾಣ ನಿಯಂತ್ರಣಾಧಿಕಾರಿ ಹೇಮಂತ್‌ಕುಮಾರ್ ಜೊತೆಗೆ ಸಮಾಲೋಚನೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಬಸ್ ನಿಲ್ದಾಣದಲ್ಲಿ ಪೋಲಿಸ್ ಭದ್ರತೆ ಕುರಿತು ಅಧಿಕಾರಿಗಳೊಂದಿಗೆ ಪೊಲೀಸ್ ಕಮಿಷನರ್ ಚಂದ್ರಗುಪ್ತ ಚರ್ಚೆ ನಡೆಸಿದರು. ಇನ್ನು ಮುಷ್ಕರನಿರತ ಸಿಬ್ಬಂದಿಯನ್ನ ಮನವೊಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಕೆಎಸ್ ಆರ್ ಟಿ ಸಿ ಅಧಿಕಾರಿಗಳು ಮನವಿ ಮಾಡುತ್ತಿದ್ದಾರೆ.
ಖಾಸಗಿ ಬಸ್ ಮೊರೆ ಹೋದ ಪ್ರಯಾಣಿಕರು…
ಮೈಸೂರು ಮಂಡ್ಯ, ಬೆಂಗಳೂರು ಬಸ್ ಸಂಚಾರ ಆರಂಭವಾಗದ ಹಿನ್ನೆಲೆ, ಪ್ರಯಾಣಿಕರು ಖಾಸಗಿ ಬಸ್ ಗಳ ಮೊರೆ ಹೋಗುತ್ತಿದ್ದು, ಮೈಸೂರು ಕೇಂದ್ರ ಬಸ್ ಆಸುಪಾಸಿನಲ್ಲಿ ಖಾಸಗಿ ಬಸ್ ಸಂಚಾರ ನಡೆಸುತ್ತಿವೆ. ಸರ್ಕಾರಿ ಬಸ್ ಸಂಚಾರವಿಲ್ಲದ ಹಿನ್ನೆಲೆ ಪ್ರಯಾಣಿಕರು ಅನಿವಾರ್ಯವಾಗಿ ಖಾಸಗಿ ಬಸ್ ಏರಿ ಪ್ರಯಾಣಸುತ್ತಿದ್ದಾರೆ.
Key words: Police Commissioner- Dr Chandragupta -visits -Mysore -Central Bus Stand-transport-protest