ಬೆಂಗಳೂರು,ಡಿಸೆಂಬರ್,19,2020(www.justkannada.in) : ನನ್ನನ್ನು ಸೋಲಿಸಿದವರು, ಆತ್ಮವಿಮರ್ಶೆ ಮಾಡಿಕೊಂಡು ತಾವೇ ಪಕ್ಷಬಿಟ್ಟು ಹೋಗಬೇಕು ಎಂದು ಹೇಳಿದ್ದೀರಿ. 2009-10ರ ಉಪಚುನಾವಣೆ, 2013ರ ಚುನಾವಣೆಗಳಲ್ಲಿ ಒಳ ಒಪ್ಪಂದ ಮಾಡಿಕೊಂಡ ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್ ಬಿಡುವುದು ಯಾವಾಗ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.ಈಗಾಗಲೇ ಒಂದು ಬಾರಿ ತಾಯಿಯಂಥ ಪಕ್ಷಕ್ಕೆ ದ್ರೋಹ ಮಾಡಿದ ನಿಮ್ಮ ಉತ್ತರ ಕೇಳಲು ಕಾತುರನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
2018ರಲ್ಲಿ ಮೈತ್ರಿಯಾಗಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದು ಹೈಕಮಾಂಡ್ನ ನಿರ್ಧಾರವಾಗಿತ್ತು ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ.
ಆದರೆ, ಚಾಮುಂಡೇಶ್ವರಿ ಭಾಷಣದ ವೇಳೆ, ನಾನು ಒಪ್ಪದೇ ಹೋಗಿದ್ದಿದ್ದರೆ ಕುಮಾರಸ್ವಾಮಿ ಅವರನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
key words : When-your-introspection?-When-Congress- leaving?-Siddaramaiah-H.D.Kumaraswamy-Question