ಮೈಸೂರು,ಡಿಸೆಂಬರ್,20,2020(www.justkannada.in) : ಸಿದ್ದರಾಮಯ್ಯ ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಯಾಗಬೇಕೆಂದು ಅವರು ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉಂಟಾದ ಸೋಲು ಮರ್ಮಾಘಾತವನ್ನುಂಟು ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯ ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ. ಈ ಮೊದಲು ವರುಣ ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು. ತಾಲ್ಲೂಕು ಬೋರ್ಡ್ ಮೆಂಬರ್ ನಿಂದ ಹಿಡಿದು ಉಪ ಮುಖ್ಯಮಂತ್ರಿ ಆಗುವವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಇದ್ದರು ಎಂದು ವಿವರಿಸಿದರು.
ವರುಣ ಕ್ಷೇತ್ರ ಉದಯವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೂ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂಬ ವಿಚಾರ. ಬಿಜೆಪಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ 8 ಸಾವಿರ ಮತ ಪಡೆದಿತ್ತು. ಆಗ ಹೇಮಂತ್ ಕುಮಾರ್ ಗೌಡ ಅಭ್ಯರ್ಥಿಯಾಗಿದ್ದರು. 2018 ರ ಚುನಾವಣೆಯಲ್ಲಿ ಗೋಪಾಲ್ ರಾವ್ ಅಭ್ಯರ್ಥಿಯಾಗಿದ್ದರು. ಬಿಜೆಪಿ 15 ಸಾವಿರ ಮತ ಪಡೆಯಿತು. ನಾನು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಬಿಜೆಪಿ ಡಬಲ್ ಓಟ್ ಪಡೆದುಕೊಂಡಿದೆ. ಪರೋಕ್ಷವಾಗಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದವನ್ನು ಜಿ. ಟಿ.ದೇವೇಗೌಡ ಅಲ್ಲಗೆಳೆದರು.
key words : Siddaramaiah’s-mind-pain-claims-MLA G.T.DeveGowda