ನವದೆಹಲಿ,ಡಿಸೆಂಬರ್,21,2020(www.justkannada.in) : ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಮೋತಿಲಾಲ್ ವೋರಾ ನಿಧನರಾಗಿದ್ದಾರೆ.
ವೋರಾ ಅವರನ್ನು ಭಾನುವಾರ ರಾತ್ರಿ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 93ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಒಂದು ದಿನದ ನಂತರ ನಿಧನರಾಗಿದ್ದಾರೆ ಎನ್ನಲಾಗಿದೆ.
ಹಲವು ವರ್ಷಗಳ ಕಾಲ ಪತ್ರಿಕೋದ್ಯಮಕ್ಷೇತ್ರದಲ್ಲಿ ಕೆಲಸ ಮಾಡಿದ ಮೋತಿಲಾಲ್ ವೋರಾ, ನಂತರ 1968ರಲ್ಲಿ ರಾಜಕೀಯ ಪ್ರವೇಶಿಸಿದರು. 1970ರಲ್ಲಿ ಮಧ್ಯಪ್ರದೇಶ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಮಧ್ಯಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು.
1977 ಮತ್ತು 1980ರಲ್ಲಿ ವಿಧಾನಸಭೆಗೆ ಮರು ಆಯ್ಕೆಗೊಂಡು 1980ರಲ್ಲಿ ಅರ್ಜುನ್ ಸಿಂಗ್ ಸಂಪುಟದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು. 1983ರಲ್ಲಿ ಮೋತಿಲಾಲ್ ವೋರಾ ಸಂಪುಟ ದರ್ಜೆ ಸಚಿವರಾದರು ಮತ್ತು ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಯೂ ನೇಮಿಸಲಾಗಿತ್ತು. 1985ರ ಫೆಬ್ರವರಿ 13ರಂದು ವೋರಾ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.
key words : Congress-veteran-MotilalVora-passes-away