ಮೈಸೂರು,ಡಿಸೆಂಬರ್,22,2020(www.justkannada.in): ಗ್ರಾಮಪಂಚಾಯತ್ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.
ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಶುರುವಾಗಿ ಸಂಜೆ 5 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿದಿದೆ. ಮೈಸೂರು ಜಿಲ್ಲೆಯ ಐದು ತಾಲೂಕುಗಳಲ್ಲಿ ಗ್ರಾಮಪಂಚಾಯತಿ ಮತದಾನ ನಡೆದಿದೆ. ಜಿಲ್ಲೆಯಲ್ಲಿ ಮೊದಲನೇ ಹಂತದ ಚುನಾವಣೆಯಲ್ಲಿ ಹುಣಸೂರು, ಕೆ.ಆರ್.ನಗರ, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ವೋಟಿಂಗ್ ನಡೆದಿದೆ.
ಐದು ತಾಲ್ಲೂಕಿನ ಒಟ್ಟು 148 ಗ್ರಾಮ ಪಂಚಾಯತಿಗಳ 949 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿದೆ. 6165 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2303 ಸದಸ್ಯರ ಸ್ಥಾನಗಳಲ್ಲಿ 125 ಸದಸ್ಯ ಸ್ಥಾನಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 6 ಸದಸ್ಯ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆಗಿಲ್ಲ. ಪೊಲೀಸ್ ಭದ್ರತೆಯೊಡನೆ ಮತಗಟ್ಟೆ ಅಧಿಕಾರಿಗಳು ಚುನಾವಣಾ ಕರ್ತವ್ಯ ಮುಗಿಸಿ ಡಿ ಮಸ್ಟರಿಂಗ್ ಕೇಂದ್ರಗಳತ್ತ ಹೊರಟಿದ್ದಾರೆ.
2ನೇ ಹಂತದ ಗ್ರಾಮಪಂಚಾಯತ್ ಚುನಾವಣೆಯ ಮತದಾನ ಡಿಸೆಂಬರ್ 27 ರಂದು ನಡೆಯಲಿದ್ದು ಡಿಸೆಂಬರ್ 30 ರಂದು ಫಲಿತಾಂಶ ಹೊರ ಬೀಳಲಿದೆ.
Key words: gp election- End – voting -process – candidates