ಗ್ರಾಪಂ ಚುನಾವಣೆ ರೈತ ಸಂಘ ಮತ್ತು ಸ್ವರಾಜ್ ಇಂಡಿಯಾ ಬೆಂಬಲಿತ 1800 ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆ : ರೈತ ಮುಖಂಡ ಬಡಗಲಪುರ ನಾಗೇಂದ್ರ

ಬೆಂಗಳೂರು,ಡಿಸೆಂಬರ್,31,2020(www.justkannada.in) :  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಸ್ಪರ್ಧಿಸಿದ್ದ ರೈತ ಸಂಘ ಮತ್ತು ಸ್ವರಾಜ್ ಇಂಡಿಯಾ ಬೆಂಬಲಿತ 1800 ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.jk-logo-justkannada-mysore

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಸ್ಪರ್ಧಿಸಿದ್ದ ರೈತ ಸಂಘ ಮತ್ತು ಸ್ವರಾಜ್ ಇಂಡಿಯಾ ಬೆಂಬಲಿತ 1800 ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ರೈತ ಸಂಘ, ಸ್ವರಾಜ್ ಇಂಡಿಯಾ ಬೆಂಬಲಿತ ಅಭ್ಯರ್ಥಿಗಳು ಜನಪರ ವಿಚಾರಗಳನ್ನು ಮತದಾರರ ಮುಂದಿಟ್ಟು ಚುನಾವಣೆಯನ್ನು ಎದುರಿಸಿದ್ದರೂ, ಇದಕ್ಕೆ ಸ್ಪಂದಿಸಿದ ಮತದಾರರು 1800 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದಿದ್ದಾರೆ.

 

ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 33 ಗ್ರಾಪಂಗಳಲ್ಲಿ ರೈತ ಸಂಘ, ಸ್ವರಾಜ್ ಇಂಡಿಯಾ ಅರ್ಧಕ್ಕಿಂತಲೂ ಹೆಚ್ಚು ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲಿದ್ದು, ಇತರೆ ಪಂಚಾಯಿತಿಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ.Grapham election-Farmers-Association-Supported-Swaraj India-Over 1800-candidates-selected-Farmer-leader-Badagalpur Nagendra

ಮೇಲುಕೋಟೆ ಕ್ಷೇತ್ರದ ಕೆಲವು ಪಂಚಾಯಿತಿಗಳಲ್ಲಿ ನೂರಕ್ಕೆ ನೂರರಷ್ಟು ಸಂಘದ ಬೆಂಬಲಿತ ಅಭ್ಯರ್ಥಿಗಳೇ ಆಯ್ಕೆಯಾಗಿ ಬಂದಿರುವುದು ವಿಶೇಷವಾಗಿದೆ ಮೈಸೂರು ಜಿಲ್ಲೆಯಲ್ಲಿ 100ಕ್ಕಿಂತಲೂ ಹೆಚ್ಚು ಸದಸ್ಯರು ಆಯ್ಕೆಯಾಗಿರುತ್ತಾರೆ ಎಂದು ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

key words : Grapham election-Farmers-Association-Supported-Swaraj India-Over 1800-candidates-selected-Farmer-leader-Badagalpur Nagendra