ಮಣಿಪಾಲ,ಜನವರಿ,01,2021(www.justkannada.in) : ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದೆ.ಈ ಸೌಲಭ್ಯವು ಗುರುವಾರದಿಂದಲೇ ಒದಗಿಸಲಾಗಿದೆ. ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.
ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದ್ದಾರೆ.
key words : Pajavara shri vishwaprasannathirtha shripaada-Y Rank-Security-Granted …!