“ಯೂಥ್ ಕಾಂಗ್ರೆಸ್ ಚುನಾವಣೆ ಪಾರದರ್ಶಕ, ಮುಕ್ತವಾಗಿ ನಡೆಯಲಿ” : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು,ಜನವರಿ,10,2021(www.justkannada.in) : ನಾವು ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಿಲ್ಲಿಸಿದ್ದೇವೆ. ಹೀಗಾಗಿ, ಯೂಥ್ ಕಾಂಗ್ರೆಸ್ ಚುನಾವಣೆ ನಡೆಯುತ್ತಿದೆ. ಪಾರದರ್ಶಕ ಹಾಗೂ ಮುಕ್ತವಾಗಿ ಚುನಾವಣೆ ನಡೆಯಬೇಕು. ಪಕ್ಷದ ಅಧ್ಯಕ್ಷನಾಗಿ ನಾನು ಯಾರ ಪರವಾಗಿ ನಿಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.jk-logo-justkannada-mysoreಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯೂಥ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಾರದರ್ಶಕವಾಗಿ ನಡೆಯಲಿ. ಪಕ್ಷ ಸಂಘಟನೆ ಮಾಡುವ ಉತ್ತಮ ನಾಯಕನ ಆಯ್ಕೆಯಾಗಲಿ. ತಾವು ಈ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದ್ದಾರೆ.

ತಾಲೂಕು ಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದವರೆಗೂ ನಾಯಕರು ಬೆಳೆಯಬೇಕು ಎಂಬುದು ನಮ್ಮ ನಾಯಕರಾದ ರಾಜೀವ್ ಗಾಂಧಿ ಅವರ ಚಿಂತನೆ. ಅದಕ್ಕಾಗಿ ಅವರು ಸಂವಿಧಾನ ತಿದ್ದುಪಡಿ ತರಲಾಗಿದೆ ಎಂದರು.Youth,Congress,Election,Transparent,Freely,Walk,KPCC,President,D.K.Shivakumar

ಯಾರಿಗೂ ವಿರೋಧ ಮಾಡುವುದಿಲ್ಲ.‌ ಯಾರಿಗೆ ಆಸಕ್ತಿ ಇದೆಯೋ, ಯಾರು ಪಕ್ಷಕ್ಕೆ ಸಮಯ ಕೊಟ್ಟು ಸಂಘಟನೆಗೆ ಶ್ರಮಿಸುತ್ತಾರೋ ಅಂತಹವರನ್ನು ಆಯ್ಕೆ ಮಾಡಿ ಕಳುಹಿಸಿ ಎಂದು ಮತದಾರರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

key words : Youth-Congress-Election-Transparent-Freely-Walk-KPCC-President-D.K.Shivakumar