ಬೆಂಗಳೂರು,ಜನವರಿ,11,2021(www.justkannada.in) : ಆರೋಗ್ಯ ಕವಚ–108 ಹಾಗೂ 104-ಆರೋಗ್ಯ ಸಹಾಯವಾಣಿ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಿದರು.
ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ‘ಆರೋಗ್ಯ ಕವಚ – 108’ ಹಾಗೂ ‘104 – ಆರೋಗ್ಯ ಸಹಾಯವಾಣಿ’ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸರ್ಕಾರಕ್ಕೆ ಸಲಹೆ ನೀಡಲು ರಚಿಸಿರುವ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಾಯಿತು.
ಈ ಸಂದರ್ಭ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.
key words : 108, 104 Health,Helpline,Adequate,implementation,services,Minister,Health,Dr.K.Sudhakar,Meeting