ನವದೆಹಲಿ,ಜನವರಿ,17,2021(www.justkannada.in) : ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಈಗ ದೇಶದ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು, ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿಸಿದ್ದಾರೆ.
ಈ ಕುರಿತು ಮಾತನಾಡಿ, ಕೆವಾಡಿಯಾ ಪ್ರವಾಸಿಗರ ತಾಣವಾಗಿ ಹೊರಹೊಮ್ಮುತ್ತಿದೆ. ಏಕತಾ ಪ್ರತಿಮೆ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ರೈಲ್ವೆ ಯೋಜನೆ ಕೆವಾಡಿಯಾದ ಬುಡಕಟ್ಟು ಜನಾಂಗಕ್ಕೂ ಅನುಕೂಲವಾಗಲಿದೆ ಎಂದಿದ್ದಾರೆ.
ಬುಡಕಟ್ಟು ಜನಾಂಗದ ಜೀವನ ಸಹ ಬದಲಿಸಲಿದೆ. ಕೆವಾಡಿಯಾಗೆ ಅನೇಕ ಸೌಲಭ್ಯಗಳನ್ನು ತರಲಾಗಿದೆ. ಆದಿವಾಸಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
key words : Kevadia-Connecting-different-areas-8 trains-Prime Minister-Narendra Modi-Driving