ಬೆಂಗಳೂರು, ಜನವರಿ 21, 2021 (www.justkannada.in): 2021ರ ಏಷ್ಯಾ ಕಪ್ ಕ್ರಿಕೆಟ್ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ನಡೆಯಬೇಕಿದ್ದ ಏಷ್ಯಾ ಕಪ್ ರದ್ದಾಗಿತ್ತು.
ಏಷ್ಯಾಕಪ್ ವೇಳೆಗೆ ಐಸಿಸಿ ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಏಷ್ಯಾ ಕಪ್ ಹಾಗೂ 2021 ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಗಳು ಕ್ಲಾಶ್ ಆಗುವ ಸಾಧ್ಯತೆ ಇದೆ. ಒಂದೊಮ್ಮೆ ಏಷ್ಯಾ ಕಪ್ ನಡೆದರೂ, ಟೀಮ್ ಇಂಡಿಯಾ ಟೂರ್ನಿಯಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ.