ಶಿವಮೊಗ್ಗ,ಜನವರಿ,23,2021(www.justkannada.in): ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ಸ್ಥಳಕ್ಕೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗದಿಂದ ನೇರವಾಗಿ ಘಟನಾ ಸ್ಥಳಕ್ಕೆ ತೆರಳಿದ ಸಿಎಂ ಬಿಎಸ್ ಯಡಿಯೂರಪ್ಪ ಘಟನಾ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಸಿಎಂ ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಮತ್ತು ಅಧಿಕಾರಿಗಳು ಸಾಥ್ ನೀಡಿದರು.
ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಗಣಿದುರಂತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಪ್ರಾಥಮಿಕವಾಗಿ ಹೈದರಾಬಾದ್ ತಂಡ ತನಿಖೆ ನಡೆಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇಲ್ಲಿನ ಎಲ್ಲಾ ಕ್ರಷರ್ ಗಳಿಗೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಆದರೆ ಕಲ್ಲುಗಣಿಗಾರಿಕೆಗೆ ಯಾವುದೇ ಅನುಮತಿ ನೀಡಿಲ್ಲ ಎಂದರು.
ಘಟನೆಗೆ ಸಂಬಂಧಿಸಿದ ಆರೋಪಿಗಳು ಯಾರೇ ಆದರೂ ಸರಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
Key words: CM BS yeddyurappa- visits- inspection – hunasodu-blast-shivamogga