ನವದೆಹಲಿ,ಜೂ,27,2019(www.justkannada.in): ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ವೇಗವಾಗಿ 20ಸಾವಿರ ರನ್ ಪೂರೈಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.
ಇಂದು ಭಾರತ ಮತ್ತು ವೆಸ್ಟ್ ಇಂಡಿಸ್ ತಂಡದ ನಡುವೆ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು ಪಂದ್ಯದಲ್ಲಿ ವಿರಾಟ್ ಕೊಹ್ಲಿ 37 ರನ್ ಗಳಿಸಿ ವೇಗವಾಗಿ 20 ಸಾವಿರ ರನ್ ಪೂರೈಸಿ ದಾಖಲೆ ಮಾಡಿದ್ದಾರೆ. ಈ ಮೂಲಕ ಶ್ರೇಷ್ಠ ಬ್ಯಾಟ್ಸ್ ಮನ್ ಗಳಾದ ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಮತ್ತು ವೆಸ್ಟ್ ಇಂಡೀಸ್ ನ ಬ್ರಿಯನ್ ಲಾರಾ ಅವರ ದಾಖಲೆಗಳನ್ನು ಹಿಂದಿಕ್ಕಿದ್ದಾರೆ.
ಟೆಸ್ಟ್, ಏಕದಿನ ಹಾಗೂ ಟಿ-20 ಸೇರಿದಂತೆ ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ 20 ಸಾವಿರ ರನ್ ಪೂರೈಸಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ವಿಶ್ವದ 12ನೇ ಹಾಗೂ ಭಾರತದ 3ನೇ ಬ್ಯಾಟ್ಸ್ ಮನ್ ಎಂಬ ಗೌರವಕ್ಕೆ ಪಾತ್ರರಾದರು. ಸಚಿನ್ ತೆಂಡೂಲ್ಕರ್ (34,357) ಮತ್ತು ರಾಹುಲ್ ದ್ರಾವಿಡ್ (24,208) ಮೊದಲೆರಡು ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ 417ನೇ ಪಂದ್ಯದಲ್ಲಿ 20 ಸಾವಿರ ರನ್ ಪೂರೈಸಿದರು. ಇದರಲ್ಲಿ 131 ಟೆಸ್ಟ್, 224 ಏಕದಿನ ಹಾಗೂ 62 ಟಿ-20 ಪಂದ್ಯಗಳು ಸೇರಿವೆ.
ಸದ್ಯ ವೆಸ್ಟ್ ಇಂಡಿಸ್ ವಿರುದ್ದದ ಇಂದಿನ ಪಂದ್ಯದಲ್ಲಿ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು 37ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ಕಲೆ ಹಾಕಿದೆ. ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಸ್ಕ್ರೀಜ್ ನಲ್ಲಿದ್ದಾರೆ.
Key words: Team India- captain- Virat Kohli – world record- 20,000 runs.