ಮೈಸೂರು,ಜನವರಿ,01,2021(www.justkannada.in) : ಕೇಂದ್ರದ ಬಜೆಟ್ ನಲ್ಲಿ ರೈತರಿಗೆ ಯಾವುದೇ ಅನುಕೂಲವಿಲ್ಲ. ಕೇಂದ್ರ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಈ ಬಜೆಟ್ ರೈತರಿಗೆ ಉಪಯೋಗವಿಲ್ಲ ಎಂದು ರೈತಮುಖಂಡ ಕುರುಬೂರು ಶಾಂತಕುಮಾರ್ ಅಸಮಾಧಾನವ್ಯಕ್ತಪಡಿಸಿದ್ದಾರೆ.ಬಜೆಟ್ ಕುರಿತು ಮಾತನಾಡಿದ ಅವರು, ರೈತರಿಗೆ ಬೆಂಬಲ ಬೆಲೆ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದರೆ, ಇದರ ಮಾನದಂಡಗಳೇ ಸರಿಯಿಲ್ಲ. ಮೊದಲು ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ಸ್ ಪಡೆಯಬೇಕು ಎಂದು ಕಿಡಿಕಾರಿದ್ದಾರೆ.
ಈ ಹಿಂದೆಯೂ ರೈತರ ಆದಾಯ ದ್ವಿಗುಣ ಮಾಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಅಂತಹ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಇದೊಂದು ನಿರಾಶಾದಾಯಕ ಬಜೆಟ್. ರೈತಮುಖಂಡ ಕುರುಬೂರು ಶಾಂತಕುಮಾರ್ ಬೇಸರವ್ಯಕ್ತಪಡಿಸಿದ್ದಾರೆ.
key words : farmers-No use-Center-Budget-farmer-Leader
Kuruburu Shanthakumar-Upset