ನವದೆಹಲಿ,ಫೆಬ್ರವರಿ,5,2021(www.justkannada.in): ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳು ರೈತರ ಪರವಿಲ್ಲ. ಹೀಗಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕುವ ನಿಮ್ಮ ತಂತ್ರ ಫಲಿಸಲ್ಲ ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.
ರಾಜ್ಯಸಭೆಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನೀವು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿದ್ದು, ಹೀಗಾಗಿ ಅನ್ನದಾತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕುವ ನಿಮ್ಮ ತಂತ್ರ ಫಲಿಸಲ್ಲ. ರೈತ ವಿರೋಧಿ ಕಾನೂನುಗಳನ್ನ ಹಿಂಪಡೆಯಿರಿ ಎಂದು ಆಗ್ರಹಿಸಿದರು.
ಕೆಂಪುಕೋಟೆ ಮತ್ತಿಗೆಯನ್ನ ಖಂಡಿಸುತ್ತೇವೆ. ಕೆಂಪುಕೋಟೆ ಮುತ್ತಿಗೆ ಘಟನೆಯೂ ಕುತಂತ್ರದ ಕೃತ್ಯ. ಈ ಘಟನೆಯನ್ನ ನಾವು ಸಮರ್ಥಿಸಿಕೊಳ್ಳುವುದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Key words: Agricultural Amendment Act- Not – farmers-Rajya Sabha-member- Mallikarjuna kharge