ಬೆಂಗಳೂರು,ಫೆಬ್ರವರಿ,5,2021(www.justkannada.in): ಮೀಸಲಾತಿಗೆ ಆಗ್ರಹಿಸುತ್ತಿರುವ ಪಂಚಮಶಾಲಿ ಮತ್ತು ಕುರುಬ ಸಮುದಾಯಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಶಾಕ್ ನೀಡಿದ್ದಾರೆ. ಮೀಸಲಾತಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಪಂಚಮಶಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬಗ್ಗೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚರ್ಚೆಗೆ ಅವಕಾಶ ಕೋರಿದರು, ಅಲ್ಲದೆ ಈ ಬಗ್ಗೆ ಸಿಎಂ ಹೇಳಿಕೆ ನೀಡುವಂತೆ ಒತ್ತಾಯಿಸಿದರು.
ಈ ಕುರಿತು ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ನಮ್ಮದು ಪ್ರಾದೇಶಿಕ ಪಕ್ಷವಲ್ಲ, ರಾಷ್ಟ್ರೀಯ ಪಕ್ಷ. ಕೇಂದ್ರದ ವರಿಷ್ಠರನ್ನ ಬಿಟ್ಟು ನಾನು ಯಾವುದೇ ನಿರ್ಧಾರ ಕೈಗೊಳ್ಳಲು ಆಗಲ್ಲ. ಬಿಜೆಪಿಯ 25 ಸಂಸದರಿದ್ದಾರೆ. ನೀವು ಯಾರನ್ನಾದರೂ ಸರಿ ಕರೆದುಕೊಂಡು ಹೋಗಿ ವರಿಷ್ಠರನ್ನ ಭೇಟಿಯಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.
ಹಾಗೆಯೇ ಮೀಸಲಾತಿ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಬಿಎಸ್ ವೈ ಸ್ಪಷ್ಟಪಡಿಸಿದರು. ಎಸ್ ಟಿ ಮೀಸಲಾತಿ ನೀಡುವಂತೆ ಕುರುಬ ಸಮುದಾಯ, 2ಎ ಮೀಸಲಾತಿ ನೀಡುವಂತೆ ಪಂಚಮಶಾಲಿ ಸಮುದಾಯದ ಮುಖಂಡರು ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದಾರೆ.
Key words: High Command- decision – reservation – final-CM BS Yeddyurappa- clarified