ಮೈಸೂರು,ಫೆಬ್ರವರಿ,06,2021(www.justkannada.in) : ವಿಜ್ಞಾನ ಪಠ್ಯವಸ್ತುವಿಗೆ ಸಂಬಂಧಿಸಿದ ಪ್ರಯೋಗಗಳ ಸಪ್ತಾಹವು ವಿದ್ಯಾರ್ಥಿಗಳು ವೈಜ್ಞಾನಿಕ ಪರಿಕಲ್ಪನೆಗಳನ್ನು ಬೆಳೆಸಿಕೊಳ್ಳಲು ಸಹಕಾರಿ ಎಂದು ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಾಮರಾಧ್ಯ ಹೇಳಿದರು.ನರಸೀಪುರ ದೊಡ್ಡಮನೆ ಸುಜನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುವೆಂಪುನಗರದಲ್ಲಿ ಕೆಪಿಎಸ್ ಶಾಲೆಯಲ್ಲಿ ಮೈಸೂರು ದಕ್ಷಿಣ ವಲಯ ವ್ಯಾಪ್ತಿಯ 09 ಸರ್ಕಾರಿ ಪ್ರೌಢ ಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ಪಠ್ಯವಸ್ತುವಿಗೆ ಸಂಬಂಧಿಸಿದ ಪ್ರಯೋಗಗಳ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ವಿಜ್ಞಾನ ಪಠ್ಯವಸ್ತುವಿಗೆ ಸಂಬಂಧಿಸಿದ ಪ್ರಯೋಗಗಳ ಸಪ್ತಾಹ ಪೂರಕವಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಟ್ರಸ್ಟಿಯವರಾದ ಎನ್.ಎಸ್.ಪ್ರಕಾಶ್, ಸಂಯೋಜಕ ಕೆ.ರಮೇಶ್ ಬಾಬು ಹಾಗೂ ಉಷಾ ಇತರರು ಉಪಸ್ಥಿತರಿದ್ದರು.
key words : Science-experiments-Week-Students-Scientific-concepts-growth-Cooperative