ಬೆಂಗಳೂರು,ಫೆಬ್ರವರಿ,11,2021(www.justkannada.in) : ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸುವಂತೆ ಬ್ಯಾಂಕರ್ ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ.
ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳ ಪ್ರಗತಿ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬ್ಯಾಂಕರ್ ಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಕೆ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಅವುಗಳನ್ನು ವಿವಿಧ ಬ್ಯಾಂಕುಗಳಿಗೆ ಕಳುಹಿಸಿ, ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ಜುಲೈ 2020ರಿಂದ ಜಾರಿಗೆ ಬಂದಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಅನುದಾನ ಬಿಡುಗಡೆ. ಪಿ.ಎಂ.ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇಕಡಾ 7ರ ಬಡ್ಡಿ ದರದಂತಹ ಪ್ರೋತ್ಸಾಹಕಗಳು ಹಾಗೂ ಡಿಜಿಟಲ್ ವಹಿವಾಟಿಗೆ ಪುರಸ್ಕಾರ ನೀಡುವುದಾಗಿದೆ ಎಂದರು.
ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ವೇಳಾಪಟ್ಟಿ ನಿಗದಿಪಡಿಸಿ, ಸಾಲ ವಿತರಣೆ ಮಾಡುವಂತೆ ಸೂಚನೆ ಎಂದು ತಿಳಿಸಿದ್ದಾರೆ.
key words : Prime Minister-Awas-Swanidhi-schemes-Distribute-Debt Quickly-CM B.S.Yeddyurappa-Notice-Bankers