ಚೆನ್ನೈ,ಫೆಬ್ರವರಿ,16,2021(www.justkannada.in): ಪ್ರವಾಸಿ ಇಂಗ್ಲೇಂಡ್ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತು ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ಇದೀಗ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಸೇಡು ತೀರಿಸಿಕೊಂಡಿದೆ.
ಇಲ್ಲಿನ ಎಂ. ಎ. ಚಿದಂಬರಂ ಮೈದಾನದಲ್ಲಿ ನಡೆದ ಇಂಡಿಯಾ- ಇಂಗ್ಲೆಂಡ್ ನಡುವಿನ 4 ಟೆಸ್ಟ್ ಪಂದ್ಯಗಳ ಸರಣಿಯ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್ಗಳ ಭರ್ಜರಿ ಜಯ ಸಾಧಿಸಿದೆ.
2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ನೀಡಿದ್ದ 482 ರನ್ಗಳ ಗುರಿ ಬೆನ್ನಟ್ಟಿದ ಇಂಗ್ಲೇಂಡ್ 164 ರನ್ಗಳಿಗೆ ಆಲ್ ಔಟ್ ಆಗಿ ಸೋಲನುಭವಿಸಿತು. ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ 329 ರನ್ ಗಳಿಗೆ ಆಲ್ ಔಟ್ ಆಯಿತು. ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ (161 ರನ್) ರಹಾನೆ (67 ರನ್) ಹಾಗೂ ರಿಶಭ್ ಪಂತ್ (58 ರನ್) ಅಬ್ಬರದ ಬ್ಯಾಟಿಂಗ್ ನೆರವಿನಿಂದ 329 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಇಂಗ್ಲೇಂಡ್ 134 ರನ್ ಗೆ ಸರ್ವಪತನ ಕಂಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಪರ ಆರ್.ಅಶ್ವಿನ್ 5 ವಿಕೆಟ್ ಕಬಳಿಸಿ ಮಿಂಚಿದರು.
ನಂತರ 2ನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ, ಇಂಗ್ಲೆಂಡ್ ಗೆ 482 ರನ್ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 164 ರನ್ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸರ್ವಪತನಗೊಂಡಿತು. ಈ ಮೂಲಕ ಟೀಂ ಇಂಡಿಯಾ 317 ರನ್ ಗಳ ಜಯ ಸಾಧಿಸಿದೆ.
ENGLISH SUMMARY…
Team India wins 2nd test
Chennai, Feb. 16, 2021 (www.justkannada.in): Team India which had lost the first test against the tourists England team has taken revenge by winning the second test comfortably.
Team India won the second test match in the 4 test match tournament, held at the M.A. Chidambaram Stadium in Chennai with a huge margin of 317 runs. The visitors who chasing 482 runs set by team India lost all its wickets for 164 runs and lost the test.
Keywords: Team India/ wins 2nd test match/ Victory for team India
Key words: Team India won-2nd Test- Against England