ಬೆಂಗಳೂರು,ಫೆಬ್ರವರಿ,21,2021(www.justkannada.in) : ಕರ್ನಾಟಕಕ್ಕೆ ಏಮ್ಸ್ ಸಂಸ್ಥೆ ತರಲು ಮತ್ತು ಕಲ್ಯಾಣ ಕರ್ನಾಟಕದಲ್ಲಿ ನಿಮ್ಹಾನ್ಸ್ ನ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ನೆರವು ನೀಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.ಬೆಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಸಚಿವ ಡಾ.ಕೆ.ಸುಧಾಕರ್ ಮನವಿ ಭೇಟಿಯಾಗಿ ಆರೋಗ್ಯ ಕೇಂದ್ರಿತ ಬಜೆಟ್ ಮಂಡಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು.
4 ಕಡೆ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ಗೆ ಮನವಿ
ರಸ್ತೆ ಅಪಘಾತಗಳಿಂದ ಉಂಟಾಗುವ ಪ್ರಾಣ ಹಾನಿಯನ್ನು ತಗ್ಗಿಸಲು ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಂತೆ 4 ಕಡೆ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ಗಳನ್ನು ಸ್ಥಾಪಿಸುವ ಹಾಗೂ ಕ್ಯಾನ್ಸರ್, ಕಿಡ್ನಿ, ಹೃದ್ರೋಗಳಿಗೆ ಚಿಕಿತ್ಸೆ ಒದಗಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನೊಳಗೊಂಡ ಹೆಲ್ತ್ ಸಿಟಿ ನಿರ್ಮಿಸುವ ಕುರಿತಂತೆ ಚರ್ಚಿಸಲಾಯಿತು.
ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆಗಾಗಿ ಸಹಕಾರ
ಮಳೆಯಾಶ್ರಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಹಾಗೂ ಕೋಚಿಮುಲ್ ಮತ್ತು ಡಿಸಿಸಿ ಬ್ಯಾಂಕ್ ವಿಭಜನೆ ಮಾಡಲು ಕೇಂದ್ರ ಸರ್ಕಾರದ ಸಹಕಾರ ಕೋರಲಾಯಿತು.
key words : Karnataka-Aims-Organization-bring-Assistance-giving-Nirmala Sitharaman-Minister-Dr.K.Sudhakar-Appeal