ಮೈಸೂರು,ಫೆಬ್ರವರಿ,25,2021(www.justkannada.in): ಪೆಟ್ರೋಲ್, ಡಿಸೆಲ್ ದರ ಏರಿಕೆ ಖಂಡಿಸಿ ನಾಳೆ ಪ್ರತಿಭಟನೆ ನಡೆಸುತ್ತೇವೆ. ನಾಳೆ 6 ಸಾವಿರಕ್ಕೂ ಹೆಚ್ಚು ಲಾರಿಗಳು ರಸ್ತೆಗಿಳಿಯಲ್ಲ ಎಂದು ಮೈಸೂರು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಕೋದಂಡರಾಮ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೋದಂಡರಾಮ, ಲಾರಿ ಮಾಲೀಕರ ಸಂಘದ ಬಂದ್ ಕರೆಗೆ ಟ್ಯಾಕ್ಸಿ, ಬಸ್ ಮಾಲೀಕರ ಸಂಘವೂ ಬೆಂಬಲ ನೀಡಿದೆ. ನಾಳೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮಾಡುತ್ತೇವೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದರು.
ಕೇಂದ್ರ ಸರ್ಕಾರ ದಿನನಿತ್ಯ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುತ್ತಿದೆ. ಅಲ್ಲದೇ ಟೋಲ್ ದರ ಏರಿಕೆ ಹಾಗೂ ಇ-ವೇ ಬಿಲ್ ನಿಂದ ಲಾರಿ ಮಾಲೀಕರಿಗೆ ತೊಂದರೆಯಾಗಿದೆ. ಈ ಬಗ್ಗೆ ಸಾಕಷ್ಟು ದಿನಗಳಿಂದಲೂ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿ ನಾಳೆ ಬಂದ್ ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Key words: More than 6,000- trucks – not – road- tomorrow-bandh-Mysore Lorry Owners Association -President