ವಿಜಯಪುರ ಮಾರ್ಚ್ 1,2021(www.justkannada.in): ವಿಜಯಪುರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಇನ್ನೂ ಹೆಚ್ಚಿನ ಒತ್ತು ನೀಡಬೇಕು. ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರು ಜಿಲ್ಲೆಯಲ್ಲಿ ತುಂಬು ಚುರುಕಿನಿಂದ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಾನೂ ಕೂಡ ಹೆಚ್ಚಿನ ನೆರವು ನೀಡುತ್ತೇನೆ. ನನ್ನಿಂದ ಏನಾಗಬೇಕು ಎಂದು ಪಕ್ಷದ ಪ್ರಮುಖರು, ಕಾರ್ಯಕರ್ತರು ಹೇಳಿ. ಎಲ್ಲ ರೀತಿಯ ಸಹಕಾರ ನೀಡಲು ನಾನು ಬದ್ದ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ ಹೇಳಿದರು.
ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವ ನಾರಾಯಣಗೌಡ, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಗೆಲ್ಲಬೇಕು. ಆ ರೀತಿಯಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ವಿಜಯಪುರ ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ನೀಡುವ ಆಶಯ ನನ್ನದು. ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಅವರಿಗೆ ಉತ್ತೇಜನ ನೀಡುವ ಕಾರ್ಯ ಮಾಡುತ್ತೇನೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಸಚಿವ ನಾರಾಯಣಗೌಡ ಹೇಳಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ್, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Key words: vijayapur-bjp-office-visit-minister- Narayanagowda