ಮೈಸೂರು,ಮಾರ್ಚ್,3,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಈ ಬಗ್ಗೆ ಈಗಲೇ ಏನನ್ನೂ ಹೇಳುವಂತಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ರಮೇಶ್ ಜಾರಕಿಹೊಳಿ ಈ ವಿಚಾರದಲ್ಲಿ ನನ್ನ ಪಾತ್ರ ಏನೂ ಇಲ್ಲ ಅಂತ ಹೇಳಿದ್ದಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಲಿ. ಸತ್ಯಾಸತ್ಯತೆ ಏನು ಅಂತ ಗೊತ್ತಾಗಲಿ. ಆ ಮೇಲೆ ಪ್ರತಿಕ್ರಿಯೆ ನೀಡಬಹುದು ಎಂದರು.
ಇಂದು ಕ್ಯಾಬಿನೆಟ್ ಮೀಟಿಂಗ್ ಇದೆ. ಅವರು ಬರ್ತಾರಾ ಸಿಎಂ ಭೇಟಿ ಮಾಡ್ತಾರ ಅಂತ ನೋಡುತ್ತೇವೆ. ಈ ವಿಚಾರದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
Key words: Ramesh jarakiiholi- CD- issue-mysore- Minister- Jagdish Shetter-reaction