ಬೆಂಗಳೂರು,ಮಾರ್ಚ್,19,2021(www.justkannada.in): ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಇದೀಗ ಮತ್ತೊಂದು ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದೆ.
ಗಣಿ ಮತ್ತು ಭೂ ಇಲಾಖೆ ಸಚಿವರಾದ ನಂತರ ವಿನೂತನ ಯೋಜನೆಗಳ ಮೂಲಕ ಇಲಾಖೆಯನ್ನು ಜನಸಾಮಾನ್ಯರತ್ತ ಕೊಂಡೊಯ್ಯಲು ಮುಂದಾಗಿರುವ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಈಗ ಮತ್ತೊಂದು ಜನಪ್ರಿಯ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ.
ಇದೇ ಮೊದಲ ಬಾರಿಗೆ ಹಾಗೂ ರಾಷ್ಟ್ರದಲ್ಲೇ ಪ್ರಥಮ ಎನ್ನಲಾದ ಸರಕಾರಿ ಒಡೆತನದ ಆಭರಣಗಳ ಮಳಿಗೆ(ಜ್ಯುವೆಲ್ಲರಿ ಶಾಪ್) ರಾಜ್ಯದಲ್ಲಿ ಸದ್ಯದಲ್ಲೇ ತಲೆ ಎತ್ತಲಿದೆ. ಈ ಮಳಿಗೆಗಳನ್ನು ಸರಕಾರವೇ ನಿರ್ವಹಣೆ ಮಾಡಲಿದ್ದು, ಗ್ರಾಹಕರ ಬೇಡಿಕೆಗೆ ತಕ್ಕಂತೆ ಆಭರಣಗಳನ್ನು ತಯಾರಿಸಲಿದೆ.
ಮೈಸೂರು ಸಿಲ್ಕ್ , ಮೈಸೂ ಸ್ಯಾಂಡಲ್ ಸೋಪ್ ಕಾವೇರಿ ಕೈ ಮಗ್ಗ ( ಹ್ಯಾಂಡ್ ಲೂಮ್ಸ್ ) ಮಾದರಿಯಲ್ಲಿ ಸರ್ಕಾರಿ ಅಭರಣಗಳ ಮಳಿಗೆ ತೆರೆಯುವ ಮಹತ್ವದ ನಿರ್ಧಾರವನ್ನು ಇಲಾಖೆ ತೆಗೆದುಕೊಂಡಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಳಿಗೆಗಳನ್ನು ತೆರೆಯಲಾಗುವುದು. ಪ್ರಾರಂಭಿಕವಾಗಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ (ಟಯರ್ 1)ಈ ಮಳಿಗೆಗಳು ಕಾರ್ಯಾರಂಭ ಮಾಡಲಿದೆ. ರಾಜ್ಯದಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ಯವಾದರೆ, ಮುಂಬರುವ ದಿನಗಳಲ್ಲಿ ಹೊರರಾಜ್ಯಗಳಲ್ಲೂ ಈ ಆಭರಣ ಮಳಿಗೆಗಳನ್ನು ತೆರೆಯುವ ಯೋಜನೆಯನ್ನು ಇಲಾಖೆ ಹಾಕಿಕೊಂಡಿದೆ ಎಂದು ಹೇಳಿದರು.
ಚಿನ್ನದ ನಾಣ್ಯ ಬಿಡುಗಡೆ
ಮದುವೆ,ಸಮಾರಂಭ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಗ್ರಾಹಕರಿಗೆ ಉಡುಗೊರೆಯಾಗಿ ನೀಡಲು ಅನುಕೂಲವಾಗುವಂತೆ ಇನ್ನು ಮುಂದೆ ಕರ್ನಾಟಕದ ಹೆಮ್ಮೆಯ ಲಾಂಛನವಾದ” ಗಂಡುಬೇರುಂಡ” ಗುರುತಿನ ಚಿನ್ನದ ನಾಣ್ಯಗಳನ್ನು ಸಹಾ ಹೊರತರಲು ಇಲಾಖೆ ತೀರ್ಮಾನಿಸಿದೆ.
ಚಿನ್ನದ ನಾಣ್ಯಗಳಿಗೆ ಗ್ರಾಹಕರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಇದನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಅಭರಣ ಮಾಲೀಕರ ಸಂಘ ಸಭೆಯಲ್ಲಿ ಮನವಿ ಮಾಡಿತು.ಇದಕ್ಕೂ ಅಸ್ತು ಎಂದ ಸಚಿವ ನಿರಾಣಿ ಅವರು,ಶೀಘ್ರದಲ್ಲೇ ಆಭರಣ ಮಳಿಗೆಗಳಲ್ಲಿ ಚಿನ್ನದ ನಾಣ್ಯಗಳನ್ನು ಹೊರತರುವುದಾಗಿ ಘೋಷಣೆ ಮಾಡಿದರು.
ಚಿನ್ನದ ವಿಶೇಷ ಆರ್ಥಿಕ ವಲಯ ಸ್ಥಾಪನೆ
ಹಿಂದುಳಿದ ಕಲ್ಯಾಣ ಕರ್ನಾಟಕವನ್ನು ಎಲ್ಲಾ ಕ್ಷೇತ್ರಗಳಲ್ಲಿ ಸರ್ವಾಂಗೀಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಚಿನ್ನದ ವಿಶೇಷ ಆರ್ಥಿಕ ವಲಯ ( ಎಸ್ ಇ ಜಡ್) ಸ್ಥಾಪನೆ ಮಾಡುವ ಮತ್ತೊಂದು ನಿರ್ಧಾರವನ್ನು ನಿರಾಣಿ ಪ್ರಕಟಿಸಿದರು.
ವಿಶೇಷ ಆರ್ಥಿಕ ವಲಯ ಸ್ಥಾಪನೆಯಾದರೆ, ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದೆ ಬರಲಿದ್ದಾರೆ.ಇದರಿಂದ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಚಿನ್ನದ ಉತ್ಪಾದನೆ ದ್ವಿಗುಣ
ಕರ್ನಾಟಕದಲ್ಲಿ ಈ ಬಾರಿ ಉತ್ಪಾದನಾ ಸಾಮಥ್ಯ ೯ ವನ್ನು ವರ್ಷದ ಅಂತ್ಯಕ್ಕೆ ದ್ವಿಗುಣಗೊಳಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ. ಪ್ರಸ್ತುತ ಹಟ್ಟಿ ಗೋಲ್ಡ್ ಮೈನ್ಸ್ ಲಿಮಿಟೆಡ್ 1500-1800 ಕೆಜಿ ಚಿನ್ನವನ್ನು ಉತ್ಪಾದನೆ ಮಾಡಲಾಗುತ್ತದೆ. 2022ರ ವೇಳೆಗೆ ಉತ್ಪಾದನೆಯನ್ನು 5000 ಕೆ.ಜಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.
ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಅತ್ಯಾಧುನಿಕ ಯಂತ್ರೋಪಕರಣಗಳಾದ ರಾಕ್ ಬ್ರೇಕರ್ಸ್, ಲೊಕೊ-ಲೋಡರ್ಸ್, ಜಂಬೊ ಡ್ರಿಲ್ಲಿಂಗ್, ಎಲ್ಎಚ್ಡಿಯ ಎಲ್ಪಿಡಿಟಿಗಳಂತಹ ಬಳಸಿಕೊಂಡು ಗಣನೀಯ ಪ್ರಮಾಣದಲ್ಲಿ ಉತ್ಪಾದನೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಇಲ್ಲಿ ಹೆಚ್ಚು ಅಗತ್ಯವಿರುವ ತಾಂತ್ರಿಕ ಪರಿಣತಿಯನ್ನು ಆಳವಡಿಸಿಕೊಂಡು ಆಳವಾದ ಗಣಿಗಾರಿಕೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಹೊಸ ಸವಾಲುಗಳನ್ನು ತೆಗೆದುಕೊಳ್ಳಲು ಸಿದ್ದವಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ENGLISH SUMMARY….
First Karnataka Gold Jewellery shop opened in the Country
Bengaluru, Mar. 19, 2021 (www.justkannada.in): Karnataka which enjoys the pride of being the only State to produce gold in the entire country is all set to create another history.
Mines and Geology Department Minister Murugesh R. Nirani who has plans to take the Department closer to the people has put the first step in this regard. Accordingly, the first government jewellery showroom is about to be established in the State soon. The Department has plans to open a chain of jewellery showrooms and it will maintain them. It has plans to introduce customized designs for the benefit of people.
“The government has decided to start the government jewellery showroom like Mysore Silk, Mysore Sandal Soap, Kaveri Handicrafts (Handlooms),” he explained.
“These jewellery showrooms will be opened by the Mines and Geology Department in association with public participation. Initially, the showrooms will be opened at Bengaluru, Mysuru, and other tier-1 cities in the state. More showrooms will be opened also in other states by looking at the response,” he added.
Keywords: Mines and Geology Department/ Murugesh R. Nirani/ Government of Karnataka/ Government Jewellery Showrooms soon
Key words: Opening – Karnataka Gold Jewelery -Store – first time – country-minister-murugesh nirani