ಬೆಂಗಳೂರು,ಮಾರ್ಚ್,21,2021(www.justkannada.in) : ಬಿ.ವೈ.ವಿಜಯೇಂದ್ರ ಉಪಚುನಾವಣೆಯ ಬಳಿಕ ಮೈಸೂರು ಭಾಗದಲ್ಲಿ 2, 3 ಕ್ಷೇತ್ರಗಳನ್ನು ಸಂಘಟಿಸುವ ಕಾರ್ಯ ಮಾಡಲಿದ್ದು, ವರುಣಾ ಕ್ಷೇತ್ರದಿಂದ ಅವರು ಸ್ಪರ್ಧಿಸುವುದನ್ನು ಪಕ್ಷ ನಿರ್ಧರಿಸಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುಂದಿನ ದಿನಗಳಲ್ಲಿ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಲಿದೆ. ಬೆಳವಗಾವಿ ಕ್ಷೇತ್ರದಲ್ಲಿಯೂ ನಾವು ಗೆಲ್ಲಲಿದ್ದೇವೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ಕಳುಹಿಸಲಾಗಿದೆ. ಶೀಘ್ರದಲ್ಲಿಯೇ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ ಎಂದು ತಿಳಿಸಿದ್ದಾರೆ.
key words : B.Y.Vijayendra-contest-Varuna-constituency-decision-party-CM B.S.Yeddyurappa