ನವದೆಹಲಿ,ಜು,4,2019(www.justkannada.in): ಕನ್ನಡಿಗರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.
ಇನ್ಸ್‌ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(ಐಬಿಪಿಎಸ್) ಬ್ಯಾಂಕಿಂಗ್ ಪರೀಕ್ಷೆಯನ್ನ ಇನ್ಮುಂದೆ ಕನ್ನಡ ಸೇರಿದಂತೆ13 ಸ್ಥಳೀಯ ಭಾಷೆಗಳಲ್ಲಿ ಐಬಿಪಿಎಸ್ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅವರು ಸದನಲ್ಲಿ ತಮ್ಮ ಮಾತನ್ನು ಮುಂದುವರೆಸುತ್ತ ಸ್ಥಳೀಯ ಭಾಷೆಯನ್ನು ಕಲಿಯುವುದರಿಂದ ನೌಕರರ ಕೆಲಸದಲ್ಲಿ ಇನಷ್ಟು ಪ್ರಗತಿಯನ್ನು ಕಾಣಬಹುದಾಗಿದೆ ಅಂತ ಹೇಳಿದರು.
ಈ ಮೂಲಕ RRB, IBPS ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುವ ಅವಕಾಶ ಸಿಗಲಿದೆ. ಬ್ಯಾಂಕಿಂಗ್ ಪರೀಕ್ಷೆಯನ್ನ ಕೇವಲ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಬರೆಯಲು ಅವಕಾಶವಿತ್ತು. ಇದೀಗ 13 ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಂಗ್ ಪರೀಕ್ಷೆ ಬರೆಯಬಹುದು.
ಕನ್ನಡ, ಅಸ್ಸಾಮೀಸ್, ಬಂಗಾಳಿ, ಗುಜರಾತಿ, ಕೊಂಕಣಿ, ಮಲ್ಯಾಲಂ, ಮಣಿಪುರಿ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಬಹುದು.
Key words: Kannada – 13 regional languages– banking- exam-nirmalasitharaman