ಬೆಂಗಳೂರು,ಮಾರ್ಚ್,27,2021(www.justkannada.in) : ದೂರು ದಾಖಲಾದರೂ, FIR ಹಾಕಿದ್ದರೂ ಅತ್ಯಾಚಾರ ಮಾಡಿದ ಪ್ರಭಾವಿ ವ್ಯಕ್ತಿಯನ್ನು ರಕ್ಷಿಸಲಾಗುತ್ತಿದೆ ಎಂಬ ಕಳಂಕ, ಕರ್ನಾಟಕಕ್ಕೆ ಬೇಡ, ಅದೇನಿದ್ದರೂ ಯುಪಿಯ ಯೋಗಿ ಆಡಳಿತಕ್ಕಿರಲಿ. ಸರ್ಕಾರ ಕೂಡಲೇ ಅತ್ಯಾಚಾರಿಯನ್ನು ಬಂಧಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಒತ್ತಾಯಿಸಿದೆ.ಲಂಚ, ಮಂಚದ ಸರ್ಕಾರದಿಂದ ಈಗಾಗಲೇ ಕರ್ನಾಟಕದ ಮರ್ಯಾದೆ ದೇಶದ ಎದುರು ಹರಾಜಾಗಿದೆ. ದೂರು ದಾಖಲಾಗಿದೆ. ಎಫ್ ಐ ಆರ್ ಹಾಕಲಾಗಿದೆ. ಇನ್ನೂ ಏಕೆ ಅತ್ಯಾಚಾರವೆಸಗಿದ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿಲ್ಲ? ಎಂದು ಪ್ರಶ್ನಿಸಿದೆ.ಸರ್ಕಾರಕ್ಕೆ ಭಯವೇ? ಮಾಜಿ ಸಚಿವರೆಂದ ಮಾತ್ರಕ್ಕೆ ಕಾನೂನಿಗೆ ಅಂತೀತರೇ? ಬಸವರಾಜ ಬೊಮ್ಮಾಯಿ ಅವರೇ ಈ ರಕ್ಷಣಾತ್ಮಕ ಆಟ ಸಾಕು, ಕೂಡಲೇ ಬಂಧಿಸಿ, ರಾಜ್ಯದ ಮಾನ ಉಳಿಸಿ ಎಂದು ಒತ್ತಾಯಿಸಿದ್ದಾರೆ.
key words : Government-Immediately-rapist-Arrest-State-Congress-Tweet