ನವದೆಹಲಿ,ಜು,5,2019(www.justkannada.in): ಕೇಂದ್ರ ಬಜೆಟ್ ನಲ್ಲಿ ಉನ್ನತ ಶಿಕ್ಷಣ ಹೆಚ್ಚು ಒತ್ತು ನೀಡಲಾಗಿದ್ದು, ಹೊಸ ಶಿಕ್ಷಣ ನೀತಿ ಜಾರಿ ಮತ್ತು ಅಂತರಾಷ್ಟ್ರೀಯ ಸಂಶೋಧನಾ ಫೌಂಡೇಶನ್ ಸ್ಥಾಪನೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಉನ್ನತ ಶಿಕ್ಷಣಕ್ಕೆ ಸರ್ಕಾರ 400 ಕೋಟಿ ಮೀಸಲಿಟ್ಟಿದೆ. ವಿಶ್ವದ ಅಗ್ರ 200 ಕಾಲೇಜುಗಳ ಪಟ್ಟಿಯಲ್ಲಿ ಭಾರತದ ಮೂರು ಕಾಲೇಜುಗಳ ಹೆಸರಿದೆ. ಇದನ್ನು ಹೆಚ್ಚಿಸುವುದು ಸರ್ಕಾರದ ಗುರಿ. ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಇದಕ್ಕಾಗಿ ರಾಷ್ಟ್ರೀಯ ಸಂಶೋಧನಾ ಫೌಂಡೇಶನ್ ಸ್ಥಾಪನೆ ಮಾಡಲು ನಿರ್ಧರಿಸಿದ್ದು, ಗ್ಯಾನ್ ಯೋಜನೆ ಮೂಲಕ ಐಐಎಂ, ಐಐಟಿ ಐಐಎಸ್ಸಿ ಜಂಟಿ ಅಧ್ಯಯನ ಮಾಡಲು ಅನುಮತಿ, ರಾಷ್ಟ್ರೀಯ ಕ್ರೀಡಾ ಶಿಕ್ಷಣ ಪ್ರಾಧಿಕಾರ ನಿರ್ಮಾಣಕ್ಕೆ ನಿರ್ಧಾರ 10 ಲಕ್ಷ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೇಂದ್ರ ಬಜೆಟ್ ನಲ್ಲಿ ತಿಳಿಸಲಾಗಿದೆ. ಭಾರತದಲ್ಲಿ ವಿದೇಶಿ ವಿದ್ಯಾರ್ಥಿಗಳ ಓದಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ‘ಸ್ಟಡಿ ಇನ್ ಇಂಡಿಯಾ’ ಯೋಜನೆ ಜಾರಿ ಮಾಡುವುದಕ್ಕೆ ನಿರ್ಧರಿಸಲಾಗಿದೆ.
ಸಾರಿಗೆ ಕ್ಷೇತ್ರಕ್ಕೆ ಕೊಡುಗೆ ಏನು..?
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ 26 ಸಾವಿರ ಕೋಟಿ ಅನುದಾನ ನೀಡಲು ಬಜೆಟ್ ನಲ್ಲಿ ಘೋಷಿಸಲಾಗಿದೆ. ಮುಂದಿನ 5 ವರ್ಷ ದಲ್ಲಿ 25 ಸಾವಿರ ಕಿಲೋ ಮೀಟರ ರಸ್ತೆ ನಿರ್ಮಾಣ ಮಾಡುವುದು. 300 ಕಿ.ಮೀ ಮೆಟ್ರೋ ಯೋಜನೆಗೆ ಅನುಮತಿ ನೀಡಲಾಗಿದೆ. ಭಾರತಮಾಲಾ , ಸಾಗರ್ ಮಾಲಾ ಯೋಜನೆಗಳ ಮೂಲ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಮೆಟ್ರೋ ರೈಲು ಉತ್ತೇಜಿಸಲು ಪಿಪಿಪಿ ಮಾದರಿಗೆ ಒತ್ತು ನೀಡಲಾಗುತ್ತಿದೆ. ಸರಕು ಸಾಗಣೆ ರೈಲುಗಳಿಗೆ ಪ್ರತ್ಯೇಕ ಟ್ರ್ಯಾಕ್ ನಿರ್ಮಾಣ ಮಾಡುವುದು .ಸಬ್ ಅರ್ಬನ್ ರೈಲು ಯೋಜನೆಗಳಿಗೆ ಒತ್ತು. ಜಲ ಐಮಾರ್ಗ ಯೋಜನೆ, ಗಂಗಾನದಿಯಲ್ಲಿ ಒಳನಾಡು ಸಾರಿಗೆಗೆ ಆಧ್ಯತೆ ನೀಡುವುದಾಗಿ ತಿಳಿಸಿದ್ದಾರೆ.
Key words: Central Budget- contributes – education – transportation