ನವದೆಹಲಿ,ಏಪ್ರಿಲ್,6,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು, ಪ್ರತಿದಿನದ ಕೇಸ್ ಗಳಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ 11 ರಾಜ್ಯಗಳ ಆರೋಗ್ಯ ಸಚಿವರ ಜತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.
ಇಂದು ಸಂಜೆ 6 ಗಂಟೆಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ 11 ರಾಜ್ಯಗಳ ಆರೋಗ್ಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಕೊರೋನಾ ಪ್ರಕರಣಗಳು ಹೆಚ್ಚಾಗಿರುವ ರಾಜ್ಯಗಳ ಸಚಿವರ ಜತೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕೊರೋನಾ ನಿರ್ವಹಣೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭಾಗಿಯಾಗಿ ರಾಜ್ಯದ ಕೊರೋನಾ ಪರಿಸ್ಥಿತಿ ತಿಳಿಸಲಿದ್ದಾರೆ. ಹಲವು ಪ್ರಮುಖ ವಿಚಾರಗಳ ಕುರಿತು ಯೂನಿಯನ್ ಮಿನಿಸ್ಟರ್ ಹರ್ಷವರ್ಧನ್ ಅವರ ಜೊತೆ ಸಚಿವ ಸುಧಾಕರ್ ಚರ್ಚೆ ನಡೆಸಲಿದ್ದಾರೆ.
Key words: Corona -increase -Meeting -Union Health Minister- today