ಬೆಂಗಳೂರು,ಏಪ್ರಿಲ್,10,2021(www.justkannada.in) : ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ನಾಳೆಯಿಂದ 4 ದಿನಗಳ ಕಾಲ ಕೋವಿಡ್ ಲಸಿಕಾ ಉತ್ಸವ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್ 11 ರಂದು ಜ್ಯೋತಿ ಬಾ ಪುಲೆ ಜನ್ಮದಿನ ಹಾಗೂ ಏಪ್ರಿಲ್ 14 ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯವರೆಗೂ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವ ಜರುಗಲಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ 8 ನಗರಗಳಲ್ಲಿ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಏಪ್ರಿಲ್ 20 ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
key words : tomorrow-4 days-Covid-vaccine-Festival-Minister Dr.K.Sudhakar