ಮೈಸೂರು,ಏಪ್ರಿಲ್,12,2021(www.justkannada.in) : ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಆಗ್ರಹಿಸಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಚೇರಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಕಾರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.
ಪ್ರತಿಭಟನೆಗೂ ಮುನ್ನ ಮನವಿ ಸಲ್ಲಿಸಲು ಕಛೇರಿ ಒಳ ಪ್ರವೇಶಿಸಲು ಮುಂದಾದ ರೈತರನ್ನ ಪೊಲೀಸರು ತಡೆದರು. ಚೆಸ್ಕಾಂ ಅಧಿಕಾರಿಗಳ ಜೊತೆ ಮಾತುಕತೆ ಬಳಿಕ ರೈತರಿಗೆ ಕಚೇರಿ ಒಳ ಪ್ರವೇಶಕ್ಕೆ ಅನುಮತಿ ನೀಡಿದರು.
ಸಮರ್ಪಕ ವಿದ್ಯುತ್ ಜೊತೆಗೆ ಹಗಲಿನಲ್ಲಿ ವಿದ್ಯುತ್ ನೀಡುವಂತೆ ಆಗ್ರಹಿಸಿದರು. ರಾತ್ರಿ 2 – 3 ಗಂಟೆ ವೇಳೆಯಲ್ಲಿ ವಿದ್ಯುತ್ ನೀಡುತ್ತಾರೆ. ರಾತ್ರಿ ವೇಳೆ ನೀರು ಹಾಯಿಸಲು ಹೋಗುವಾಗ ಕಾಡು ಪ್ರಾಣಿಗಳ ಹಾವಳಿಯಿರುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಹೀಗಾಗಿ, ಹಗಲು ವೇಳೆಯಲ್ಲಿ ಸಮರ್ಪಕ ವಿದ್ಯುತ್ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಲಾಯಿತು ಸುಟ್ಟು ಹೋದ ಟಿಸಿಗಳನ್ನು ತಕ್ಷಣವೇ ಬದಲಾಯಿಸುವಂತೆ ಒತ್ತಾಯಿಸಲಾಯಿತು.
key words : Agriculture-Pumpset-Adequate-Electricity-giving-Ask-Protest