ಮೈಸೂರು,ಏಪ್ರಿಲ್,14,2021(www.justkannada.in): ಮೈಸೂರಿನಲ್ಲಿ ಹೆಲಿ ಟೂರಿಸಂಗೆ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ಜನರ ವಿರೋಧದ ಯೋಜನೆಗೆ ನನ್ನ ಸಮ್ಮತಿ ಇಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಮರ ಕಡಿದು ಹೆಲಿಟೂರಿಸಂ ಮಾಡುವ ಬಗ್ಗೆ ನನಗೆ ಮಾಹಿತಿಯೇ ಇಲ್ಲ. ಮಾಧ್ಯಮಗಳಲ್ಲಿ ಈ ವಿಚಾರವನ್ನ ಗಮನಿಸಿದ್ದೇನೆ. ಅರಣ್ಯ ಇಲಾಖೆ ಜನರ ಅಭಿಪ್ರಾಯ ಕೇಳಲು ಸಭೆ ಕರೆದಿದೆ. ಸಭೆಯ ತೀರ್ಮಾನದಂತೆ ಎಲ್ಲವು ನಡೆಯುತ್ತದೆ ಎಂದು ಸ್ಪಷ್ಟನೆ ನೀಡಿದರು.
ಪಾಸಿಟಿವ್ ಕೇಸ್ ಹೆಚ್ಚಾಗಿದ್ದರೂ ಮೈಸೂರಿಗೆ ಪ್ರತ್ಯೇಕ ನಿಯಮ ಜಾರಿ ಇಲ್ಲ….
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾದ ಹಿನ್ನಲೆ, ಪಾಸಿಟಿವ್ ಕೇಸ್ ಹೆಚ್ಚಾಗಿದ್ದರೂ ಮೈಸೂರಿಗೆ ಪ್ರತ್ಯೇಕ ನಿಯಮ ಜಾರಿ ಇಲ್ಲ. ರಾಜ್ಯದ ಬೇರೆ ಜಿಲ್ಲೆಗೆ ಮಾರ್ಗಸೂಚಿ ಇದೆ. ಅದೇ ಮಾರ್ಗಸೂಚಿ ಮೈಸೂರಿಗೂ ಅನ್ವಯವಾಗಲಿದೆ. ಮೈಸೂರಿನಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಹಾಗೂ ಪಾಲಿಕೆ ಕ್ರಮ ವಹಿಸುತ್ತಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಕ್ಲಬ್ ಗಳ ಹಾವಳಿ ನಿಯಂತ್ರಣಕ್ಕೆ ಸೂಚನೆ…
ಇನ್ನು ಮೈಸೂರಿನಲ್ಲಿ ಕ್ಲಬ್ ಗಳ ಹಾವಳಿ ಹೆಚ್ಚಾಗಿದೆ. ಕೆಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ಲಬ್ ಗಳು ಹಣ ಮಾಡುವ ದಂಧೆಯಾಗಿದೆ. ಇದರ ನಿಯಂತ್ರಣಕ್ಕೆ ಪೊಲೀಸ್ ಆಯುಕ್ತರ ಜೊತೆ ಸಭೆ ಮಾಡಿದ್ದೇನೆ. ಇದನ್ನು ನಿಯಂತ್ರಣ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು.
ಸಹಕಾರ ಕ್ಷೇತ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್, ಸಹಕಾರ ಕ್ಷೇತ್ರದ ಇಲಾಖೆಯಲ್ಲಿ 5 ಸಾವಿರ ಉದ್ಯೋಗ ನೀಡಬೇಕೆಂದು ಕೋವಿಡ್ 19 ಹಿನ್ನೆಲೆಯಲ್ಲಿ ಘೋಷಣೆ ಮಾಡಲಾಗಿತ್ತು. ಮೈಸೂರಿನಲ್ಲಿ ಒಂದು ಹಂತ ಮುಗಿದಿದೆ. ಬೆಂಗಳೂರು ಮಿಲ್ಕ್ ಯೂನಿಯನ್ 285 ಹುದ್ದೆ ಭರ್ತಿಗೆ ಆಹ್ವಾನಿಸಲಾಗಿದೆ. ಮಂಗಳೂರು, ಮಂಡ್ಯ ಅಪ್ರೂವ್ ಮಾಡಿಕೊಂಡಿದ್ದೇವೆ ಜೊತೆಗೆ ಎಲ್ಲಾ ಯೂನಿಯನ್ ನಿಂದ ಅಪ್ರೂವ್ ಮಾಡಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
Key words: Tree -cutting – Heli tourism –Mysore-Minister -ST Somashekhar