ಬೆಂಗಳೂರು, ಏಪ್ರಿಲ್ 19, 2021 (www.justkannada.in):
ನಟ, ನಿರ್ದೇಶಕ ಗುರುಪ್ರಸಾದ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜೇಂದ್ರ ಸೇರಿದಂತೆ ರಾಜಕಾರಣಿಗಳ ವಿರುದ್ಧ ಕಿಡಿಕಾರಿದ್ದಾರೆ.
ಕೊರೊನಾ ಸೋಂಕಿಗೆ ತುತ್ತಾಗಿರುವ ಮಠ ಖ್ಯಾತಿಯ ನಿರ್ದೇಶಕ, ಇದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಸೇರಿದಂತೆ ರಾಜಕಾರಣಿಗಳ ಕೊಡುಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಮಾಡಿ ಪೋಸ್ಟ್ ಮಾಡಿರುವ ಗುರುಪ್ರಸಾದ್, ಸರಕಾರ ರಾಜಕಾರಣಿಗಳ ವಿರುದ್ಧ ಆಕ್ರೋಶವೂ ಕಿಡಿಕಾರಿದ್ದಾರೆ.
ಬಡವರ ಕೂಲಿ ಕಸಿದು ತಿಂಗಳುಗಟ್ಟಲೇ ಲಾಕ್ ಡೌನ್ ಮಾಡಿ ಬಳಿಕವೂ ಕೊರೊನಾ ಸೋಂಕು ನಿಯಂತ್ರಣ ಸಾಧ್ಯವಾಗದೇ ಕೈಚೆಲ್ಲಿರುವ ಬಿಎಸ್ವೈ ಹಾಗೂ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಾ.ಸುಧಾಕರ್ ವಿರುದ್ಧವೂ ಕಿಡಿಕಾರಿರುವ ಗುರುಪ್ರಸಾದ್ ಬಿಜೆಪಿ ಸರಕಾರಕ್ಕೆ ಪ್ರಾಮಾಣಿಕತೆ ಇಲ್ಲ. ರಾಜಕಾರಣಿಗಳು ಕೊರೊನಾ ಹೆಸರಲ್ಲಿ ಕೋಟ್ಯಂತರ ರೂಪಾಯಿ ಮಾಡುತ್ತಿದ್ದಾರೆ. ರಾಜಕಾರಣಿಗಳಿಗೆ ಎಷ್ಟು ಕೋಟಿ ದುಡ್ ಬೇಕು ಸ್ವಾಮಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ಹೆಸರಲ್ಲಿ ರಾಜಕೀಯ ಮಾಡಬೇಡಿ ಎಂದಿರುವ ಗುರುಪ್ರಸಾದ್, ಡಿಕೆ ಶಿವಕುಮಾರ್ ವಿರುದ್ಧವೂ ಕಿಡಿಕಾರಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ನಿಯಂತ್ರಣ ಮಾಡಿ ಸ್ವಾಮಿ ಅದು ಬಿಟ್ಟು ಕೋಟ್ಯಂತರ ಕಾಸು ಮಾಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಮಂದಿ ಕೊರೊನಾಗೆ ಬಲಿಯಾಗುತ್ತಿರುವುದಕ್ಕೆ ತೀವ್ರ ದುಖಃ ವ್ಯಕ್ತಪಡಿಸಿದ್ದಾರೆ.