ಬೆಂಗಳೂರು,ಏಪ್ರಿಲ್,ಏಪ್ರಿಲ್,19,2021(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನ ಮುಂದೂಡಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಈ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಜಿ.ಪಂ,ತಾ.ಪಂ ಚುನಾವಣೆ ಬರುತ್ತಿವೆ. ಕೋವಿಡ್ ಹೆಚ್ಚಳದಿಂದ ಚುನಾವಣೆ ಬೇಡವೆಂಬ ಸಲಹೆ ಇವೆ. ಹಾಗಾಗಿ ಸದ್ಯಕ್ಕೆ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಮಾಡಲಾಗುತ್ತದೆ. ನಂತರ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದರು.
ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ. ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಮಾಡ್ತೇವೆ. ಅವಧಿ ಮುಗಿದ ಕಡೆ ಆಡಳಿತಾಧಿಕಾರಿ ಹಾಕಬೇಕು. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ. ಕೋವಿಡ್ ಹೆಚ್ಚು ಉಲ್ಬಣವಾಗುತ್ತಿದೆ. ಮೂರುವರೆ ಕೋಟಿ ಜನ ಇದರಲ್ಲಿ ಭಾಗಿಯಾಗಬೇಕು. ಹಾಗಾಗಿ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ಬಂದಿದೆ. ಇದನ್ನ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಆಯೋಗಕ್ಕೆ ಕಳಿಸುತ್ತೇವೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ENGLISH SUMMARY…
Govt. contemplating on postponing TP and ZP elections: Minister K.S. Eshwarappa
Bengaluru, Apr. 19, 2021 (www.justkannada.in): “The State Government is contemplating on postponing the Taluk Panchayat and Zilla Panchayat elections due to the increasing Corona cases in the state,” opined Rural Development and Panchayat Raj Minister K.S. Eshwarappa.
Speaking to the presspersons in Bengaluru about this the Minister K.S. Eshwarappa expressed his view that the Taluk Panchayat and Zilla Panchayat elections are fast approaching and many people and leaders believe to postpone them due to the steep increase in Corona cases and hence the government is also contemplating postponing it. “A final decision will be taken in this regard after discussing it in the cabinet meeting and then the decision will be recommended to the Election Commission,” he explained.
Keywords: Taluk Panchayat/ Zilla Panchayat elections/ Minister K.S. Eshwarappa/ contemplating to postpone elections
Key words: Government-thinking- postponing –TP and ZP –elections- Minister- KS Eshwarappa.