ಶಿವಮೊಗ್ಗ,ಏಪ್ರಿಲ್,20,2021(www.justkannada.in): ಬೆಂಗಳೂರಿಗರು ಕೊರೋನಾ ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಕೊರೋನಾ ಹೆಚ್ಚಳವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ. ರಾಜ್ಯಪಾಲರು ಸಭೆ ಕರೆದಿರುವುದು ಇದೇ ಮೊದಲು. ಇದು ಹೊಸ ಸಂಪ್ರದಾಯ. ಸರ್ವಪಕ್ಷ ಸಭೆಯಲ್ಲಿ ಏನೇ ತೀರ್ಮಾನ ಕೈಗೊಂಡರೂ ಸರ್ಕಾರ ಬದ್ಧ ಎಂದು ತಿಳಿಸಿದರು.
ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆಯಿಲ್ಲ. ಇದರಲ್ಲಿ ಯಾವುದೇ ಅನುಮಾನವಿಲ್ಲ.ಆದ್ರೂ, ರಾಜ್ಯಪಾಲರು ತೆಗೆದುಕೊಂಡ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರುತ್ತೇವೆ ಎಂದರು.
ಕೋವಿಡ್ ಕೇಸ್ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಜನಜಾಗೃತಿಯೇ ಪರಿಹಾರ. ಪ್ರತಿಯೋಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
Key words: governor –meeting-new tradition- Minister -KS Eshwarappa.