ಮೈಸೂರು,ಏಪ್ರಿಲ್,21,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ 2ನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ಇಂದಿನಿಂದ ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದೆ. ಈ ಮೂಲಕ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಆರಂಭವಾಗಲಿದೆ.
ಈ ಮಧ್ಯೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆ ಇಂದು ಕೇರಳ ಗಡಿಭಾಗ ಬಾವಲಿ ಚೆಕ್ ಪೋಸ್ಟ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ಕೇರಳ ಭಾಗದಿಂದ ಬರುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನ ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದು, ಭೇಟಿ ವೇಳೆ ಸಚಿವ ಎಸ್ ಟಿ ಸೋಮಶೇಖರ್ ತಪಾಸಣೆ ಪ್ರಕ್ರಿಯೆ ಸೇರಿದಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.
Key words: corona-Minister- ST Somashekhar- will – visit-bavali-check post.