ಬೆಂಗಳೂರು,ಏಪ್ರಿಲ್,26,2021(www.justkannada.in): ಕೊರೋನಾ 2ನೇ ಅಲೆಯ ಅಬ್ಬರ ಜೋರಾದ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಸಾರಿಗೆ ಸಂಚಾರ ಸೇರಿ ಎಲ್ಲವೂ ಬಂದ್ ಆಗಲಿದೆ. ಈ ಮಧ್ಯೆ ಈ ವೇಳೆ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡ್ಡಿ ಇಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಕೃಷಿ ಸಚಿವ ಬಿಸಿ ಪಾಟೀಲ್, ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡ್ಡಿ ಇರುವುದಿಲ್ಲ. ಕೃಷಿ ಉತ್ಪನ್ನ ಸಾಗಿಸುವುದಕ್ಕೆ ಯಾವುದೇ ತೊಂದರೆ ಇಲ್ಲ. ಪೊಲೀಸರು ತಡೆದರೇ ಅದಕ್ಕಾಗಿ ರೈತರಿಗೆ ಗ್ರೀನ್ ಪಾಸ್ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.
ಲಾಕ್ ಡೌನ್ ಕುರಿತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾತನಾಡಿ, ಕಟ್ಟಡ ಕಾಮಗಾರಿಯೆ ಯಾವುದೇ ತೊಂದರೆ ಇರುವುದಿಲ್ಲ. ಇದು ಲಾಕ್ ಡೌನ್ ಅಲ್ಲ. ಟಫ್ ರೂಲ್ಸ್. ಕೊರೊನಾ ತಡೆಗೆ ಬಿಗಿಕ್ರಮ ಅನುಸರಿಸಬೇಕು ಎಂದರು.
Key words: no disruption – agricultura-l activity-lockdown-Minister -BC Patil.