ಬೆಂಗಳೂರು,ಏಪ್ರಿಲ್ ,30,2021(www.justkannada.in): 2021 -22 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2021-22 ನೇ ಸಾಲಿಗೆ ಸಂಬಂಧಪಟ್ಟಂತೆ ಆರ್ಥಿಕ ವರ್ಷದ ಪೂರ್ಣ ಆಸ್ತಿ ತೆರಿಗೆಯನ್ನು ದಿನಾಂಕ 30-4-2021ರ ಒಳಗೆ ಪಾವತಿಸಿದ್ದಲ್ಲಿ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲು ಅವಕಾಶ ನೀಡಲಾಗಿದೆ.
2021-22 ನೇ ಸಾಲಿನ ಆಸ್ತಿ ತೆರಿಗೆ ಸಂಗ್ರಹಣೆಯು ಏಪ್ರಿಲ್ 2021 ರ ಮಾಹೆಯಿಂದ ಪ್ರಾರಂಭಗೊಂಡಿದೆ. ಈ ನಡುವೆ ದೇಶದ್ಯಾಂತ ಹಾಗೂ ಬೆಂಗಳೂರು ಮಹಾನಗರದಲ್ಲಿ ಕೊರೋನಾ / ಕೋವಿಡ್-19 ಸಮುದಾಯಕ್ಕೆ ವ್ಯಾಪಕವಾಗಿ ಹರಡಿದ್ದು, ಪರಿಸ್ಥಿತಿಯು ಗಂಭೀರವಾದ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ದಿನಾಂಕ : 27-04-2021 ರಿಂದ 14 ದಿನಗಳ ಕಾಲ ನಿಷೇಧಾಜ್ಞೆ ಅಥವಾ ಲಾಕ್ ಡೌನ್ ಜಾರಿ ಮಾಡಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿಯೂ ಅನಗತ್ಯವಾಗಿ ಹೊರಬಾರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು, ಸರ್ಕಾರ ಆದೇಶಿಸಿದೆ. ಇಂತಹ ಸಂದರ್ಭದಲ್ಲಿ ತೆರಿಗೆದಾರರು ಬ್ಯಾಂಕ್ ಗಳಿಗೆ ಭೇಟಿ ನೀಡಿ ಆಸ್ತಿ ತೆರಿಗೆ ಪಾವತಿಸುವುದು ಕಷ್ಟಸಾಧ್ಯವಾಗುತ್ತದೆ.
ಅದುದ್ದರಿಂದ ತೆರಿಗೆದಾರರ ಅನುಕೂಲಕ್ಕಾಗಿ 2021-22 ಸಾಲಿಗೆ ಪೂರ್ಣವಾಗಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ. 5ರಷ್ಟು ರಿಯಾಯಿತಿ ಅವಧಿಯನ್ನು ವಿಸ್ತರಿಸಿ ದಿನಾಂಕ : 31-05-2021ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: BBMP- extended – property tax –exemption- period – 2021-22.