ಮೈಸೂರು,ಮೇ,1,2021(www.justkannada.in): ಕೊರೋನಾ ಸಾವಿನ ಪ್ರಕರಣ ಹೆಚ್ಚಾದ ಹಿನ್ನೆಲೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದೆ.
ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಈ ಮಧ್ಯೆ ಮೈಸೂರಿನಲ್ಲಿ ಕೊರೊನಾ ತಡೆಗೆ ಜಿಲ್ಲಾಡಳಿತದ ವತಿಯಿಂದ ಹಲವು ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಜತೆಗೆ ಮೈಸೂರು ಮಹಾನಗರ ಪಾಲಿಕೆಯೂ ಕೊರೋನಾ ತಡೆಗಾಗಿ ಹಲವು ಕ್ರಮಗಳನ್ನ ಕೈಗೊಳ್ಳುತ್ತಿದೆ.
ಈ ಮಧ್ಯೆ ಶವ ಸಾಗಿಸುವ ವಾಹನಕ್ಕಾಗಿ ಮೈಸೂರು ಮಹಾನಗರ ಪಾಲಿಕೆ ಸಹಾಯವಾಣಿ ಪ್ರಾರಂಭಿಸಿದ್ದು, ಸಹಾಯವಾಣಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಇಂದಿನಿಂದ ಸಹಾಯವಾಣಿ ಕೇಂದ್ರ ಪ್ರಾರಂಭಗೊಳ್ಳಲಿದ್ದು, ಸಾರ್ವಜನಿಕರು ಪಾಲಿಕೆಯ ಕಂಟ್ರೋಲ್ ರೂಂ ಗೆ ದೂರವಾಣಿ ಕರೆ ಮಾಡಿದರೆ ಸಾಕು, ಕೆಲವೇ ಕ್ಷಣಗಳಲ್ಲಿ ವಾಹನ ವ್ಯವಸ್ಥೆಗೆ ಪಾಲಿಕೆ ಸಿಬ್ಬಂದಿ ಸಹಕರಿಸಲಿದ್ದಾರೆ. ಈ ಕುರಿತು ಮೈಸೂರು ಮಹಾನಗರ ಪಾಲಿಕೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ.
Key words: Covid’s- death -case –increase-Mysore city corporation-Control Room.