ಬೆಂಗಳೂರು,ಮೇ,8,2021(www.justkannada.in): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮೇ 10ರಿಂದ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಚಿವಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಕಚೇರಿ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.
ರಾಜ್ಯದಲ್ಲಿ ವೈರಸ್ 2ನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದರ ಹರಡುವಿಕೆಯ ಸರಪಳಿಯನ್ನು ಮುರಿಯಲು ಮೇ.10 ರಿಂದ ಮೇ.24ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆ ಒದಗಿಸುವಂತ ಇಲಾಖೆಯ ನೌಕರರ ಹೊರತಾಗಿ, ಇತರೆ ಇಲಾಖೆಗಳ ಅಧಿಕಾರಿ, ನೌಕರರಿಗೆ ಕಚೇರಿಗೆ ಕಡ್ಡಾಯ ಹಾಜರಾತಿಯಿಂದ ವಿನಾಯ್ತಿ ನೀಡಿ, ವಿಧಾಸಭೆಯ ಸಚಿವಾಲಯದ ಕಾರ್ಯದರ್ಶಿ ಆದೇಶಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ, ಈ ಸಚಿವಾಲಯದ ಎಲ್ಲಾ ಅಧಿಕಾರಿ, ನೌಕರರುಗಳಿಗೆ ದಿನಾಂಕ 23-05-2021ರವರೆಗೆ ಕಚೇರಿ ಹಾಜರಾತಿಯಿಂದ ವಿನಾಯಿತಿಯನ್ನು ಮುಂದುವರೆಸಲಾಗಿದೆ. ಉಳಿದಂತೆ ಈ ಸಚಿವಾಲಯದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ, ಸದರಿ ಸುತ್ತೋಲೆಯಲ್ಲಿ ತಿಳಿಸಿರುವ ಮಾರ್ಗಸೂಚಿ, ನಿಬಂಧನೆಗಳು ಜಾರಿಯಲ್ಲಿರುತ್ತದೆ. ಅಲ್ಲದೇ ಶಾಸಕರ ಭವನದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಅಲ್ಲಿನ ಅಧಿಕಾರಿ, ನೌಕರರುಗಳು ಕಾರ್ಯಗಳ ಅಗತ್ಯತೆಗೆ ಅನುಗುಣವಾಗಿ ಕ್ಷೇತ್ರಾಧಿಕಾರಿಗಳು ನಿಯೋಜಿಸಿದಂತೆ ಕಾರ್ಯನಿರ್ವಹಿಸತಕ್ಕದ್ದು. ಈ ಸುತ್ತೋಲೆಯು ದಿನಾಂಕ 23-05-2021ರವರೆಗೆ ಅಸ್ತಿತ್ವದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
Key words: Lockdown – Exemption – office -attendance – Ministry- staff- officer