ಉತ್ತರ ಕನ್ನಡ,ಮೇ,18,2021(www.justkannada.in): ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಸಿದ್ರೆ ಒಳ್ಳೆಯದು. ಎರಡನೇ ಹಂತದ ಲಾಕ್ ಡೌನ್ ಘೋಷಿಸುತ್ತಿದ್ದಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ಯಾಕೇಜ್ ಘೋಷಣೆ ಮಾಡುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಮಹಾರಾಷ್ಟ್ರ, ಕೇರಳ, ನವದೆಹಲಿಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈಗಿನ ಪರಿಸ್ಥಿತಿ ನೋಡಿದರೇ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಕೆ ಉತ್ತಮ. ಸದ್ಯ ಪರಿಸ್ಥಿತಿ ಅವಲೋಕಿಸಿ ಸಿಎಂ ಬಿಎಸ್ ವೈ ಪ್ಯಾಕೇಜ್ ಘೋಷಣೆ ಮಾಡುತ್ತಾರೆ ಎಂದರು.
ಹಳ್ಳಿಗಳಿಗೆ ಸೋಂಕು ಹರಡುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವ ಅಶೋಕ್, ಪ್ರತಿ ಹಳ್ಳಿಗಳಿಗೂ ಅಧಿಕಾರಿಗಳ ತಂಡ ಕಳಿಸಿ ಸೋಂಕು ತಡೆಯಲು ಪ್ರಯತ್ನ ಮಾಡಲಾಗುತ್ತಿದೆ. ಹಳ್ಳಿಗಳಲ್ಲಿ ಅತೀ ಹೆಚ್ಚು ಟೆಸ್ಟಿಂಗ್ ಮಾಡಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಹಳ್ಳಿಗಳಲ್ಲಿ ಹೋಂ ಐಸೋಲೇಷನ್ ಇದ್ದ ಸೋಂಕಿತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲು ಈ ನಿಯಮ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
Key words: CM –package-after – 2nd –step- lockdown –announcement-Minister- R. Ashok.