ಬೆಂಗಳೂರು,ಮೇ,22,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ 2ನೇ ಅಲೆ ತಡೆಗಟ್ಟಲು ಮೇ,24ರವರೆಗೆ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಓಡಾಡುವವರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಈ ಬಾರಿ ಲಾಕ್ ಡೌನ್ ನಿಯಮ ಮತ್ತಷ್ಟು ಟಫ್ ಇರುತ್ತದೆ. ಅನಗತ್ಯವಾಗಿ ಓಡಾಡಿದರೇ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ.
ಮೇ.24ರವರೆಗೆ ಜಾರಿಯಲ್ಲಿರುವ ಲಾಕ್ ಡೌನ್ ನಿಯಮವನ್ನ 14 ದಿನಗಳ ಕಾಲ ಅಂದರೇ ಜೂನ್ 7ರವರೆಗೆ ವಿಸ್ತರಣೆ ಮಾಡಿ ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ಹಾಗೆಯೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೆ ಸೂಚಿಸಿದ್ದಾರೆ.
Key words: Breaking down – lock-down -rule -stringent action- Bangalore City -Police Commissioner- Kamal Pant