ಬೆಂಗಳೂರು, ಮೇ 24,2021(www.justkannada.in): ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡುಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ. ಬ್ಲ್ಯಾಕ್ ಫಂಗಸ್ ಗೆ ಔಷಧಿ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಚಿವ ಸುಧಾಕರ್, 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ವ್ಯವಸ್ಥೆ ಇದೆ. ಆದರೆ ಔಷಧಿ ಸ್ವಲ್ಪ ಕೊರತೆ ಇದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಜೊತೆ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.
ಇಡೀ ದೇಶದಲ್ಲಿ ವರ್ಷಕ್ಕೆ 100-200 ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ 300 ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಕಂಡುಬರುತ್ತದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. 1 ಸಾವಿರಕ್ಕೂ ಅಧಿಕ ವೈಲ್ ಗಳನ್ನು ಕಳುಹಿಸಿಕೊಡುವ ನಿರೀಕ್ಷೆಯೂ ಇದೆ. ಬ್ಲ್ಯಾಕ್ ಫಂಗಸ್ ಗೆ 1,150 ವೈಲ್ ಔಷಧಿ ರಾಜ್ಯಕ್ಕೆ ದೊರೆತಿದೆ. 20 ಸಾವಿರ ವೈಯಲ್ ಗೆ ಬೇಡಿಕೆ ಇಡಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಈ ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನು ತಡಗಟ್ಟುವ ಬಗೆಯನ್ನೂ ಇದರಲ್ಲಿ ತಿಳಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಲಾಗಿದೆ ಎಂದು ಸಚಿವ ಸುಧಾಕರ್ ಹೇಳಿದರು.
ಕೋವಿಡ್ ನಿಂದ ಗುಣಮುಖರಾದಾಗ ಇಎನ್ ಟಿ ವೈದ್ಯರು ಮತ್ತೆ ತಪಾಸಣೆ ಮಾಡಬೇಕು. 3, 7, 21 ನೇ ದಿನ ತಪಾಸಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ವೇತನ ಪಾವತಿಸಲಾಗಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕಿದೆ. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸಲಾಗುವುದು. 10 ಲಕ್ಷಕ್ಕೂ ಅದಿಕ ಪಿಪಿಇ ಕಿಟ್ ನಮ್ಮ ಬಳಿ ಇದೆ. ಈ ವಸ್ತುಗಳ ಗುಣಮಟ್ಟದ ಬಗೆಗಿನ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು.
Key words: 300- Black Fungus -Infected – State-drug- delivery-Minister -Dr. K. Sudhakar.
ENGLISH SUMMARY….
More than 300 cases of Mucormycosis reported in the state, district hospitals to treat Black Fungus patients; Health & Medical Education Minister Dr.K.Sudhakar
Measures to supply medicine for black fungus
All district hospitals have been prepared for treatment of mucormycosis as there are more than 300 cases reported in the state, said Health & Medical Education Minister Dr.K.Sudhakar.
Speaking to the media here on Monday Dr.Sudhakar said primary investigation report has revealed more than 300 cases in the state. Centre has allocated 1,150 vials of Amphotericin B as and we have already requested to provide 20,000 vials. I have personally discussed with Union Minister DV Sadananda Gowda. Apart from district hospitals all 17 govt medical colleges have been prepared for the treatment of Black fungus, he said.
Earlier 200-300 people in a year suffered from this in the entire country, now more than 300 people have been infected in our stats alone, that may be the reason for shortage of medicine. There is increase in manufacturing of the medicine. 1,150 vials of medicine have been received in the state and we are expecting 1000 vials more in a day or two, said the Minister.
A committee has been constituted to find the cause of this infection. As per their report, contaminated water used in the humidifier, excessive use of steroids, unsterilized medical equipment, prolonged use of same mask, tube, beds etc are the primary source of this infection. Report also suggests to stop building renovation work in Covid hospitals, not allowing outsiders into ICU wards and ensure hygiene in clinical facilities.
ENT check up has to be carried out after recovering from Covid. On 3rd, 7th and 21st day check up has to be carried out.
Payment has been made to Asha workers and other staff working in health department. Revision of payment has to be discussed with central government as ASHA workers come under NHM. We have more then 10 lakh quality PPE kit and the allegations against it’s quality are false, clarified the Minister.