ಬೆಂಗಳೂರು,ಮೇ,25,2021(www.justkannada.in): ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ಗ್ರಾಮ ಪಂಚಾಯಿತಿಗಳ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಕೊರೋನಾ ಸೋಂಕು ಹೆಚ್ಚಿರುವ ಗ್ರಾಮಪಂಚಾಯಿತಿಗಳ ಪ್ರತಿನಿಧಿಗಳು, ಪಿಡಿಒ, ಅಧ್ಯಕ್ಷರು, ಕಾರ್ಯದರ್ಶಿಗಳ ಜೊತೆ ನಾಳೆ ಸಿಎಂ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೊರೋನಾ ನಿಯಂತ್ರಣ ಕುರಿತು ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ.
ಈ ಬಗ್ಗೆ ಗೃಹ ಸಚಿವಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಕೊರೋನಾ ಸೋಂಕು ಹೆಚ್ಚಾಗಿ ಕಂಡು ಬಂದಿರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ಸಭೆ ನಡೆಸಿ ಚರ್ಚಿಸಲಿದ್ದಾರೆ. ಹೆಚ್ಚಿನ ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬಂದಿರುವ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ಸೂಚನೆ ಕೊಡಲಾಗಿದೆ. ಅದರ ಜವಾಬ್ದಾರಿ ಅಲ್ಲಿನ ಪಿಡಿಒ, ಆರೋಗ್ಯ ಅಧಿಕಾರಿಗಳು, ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ವಹಿಸಲಾಗಿದೆ ಎಂದಿದ್ದಾರೆ.
Key words: Corona Increase – Rural Area-CM BS yeddyurappa- Video Conference